ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ನಿಮಗಿಲ್ಲ: ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ!

ಜುಲೈ 5, 2025 - 16:01
 0  5
ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ನಿಮಗಿಲ್ಲ: ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ!

ಮೈಸೂರು:-ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ನಿಮಗಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ. 

ಮೈಸೂರಿನಲ್ಲಿ ಮಾತನಾಡಿದ ಅವರು, ನನ್ನ ಹಳೆಯ ಮಾತಿಗೆ ನಾನು ಈಗಲೂ ಬದ್ಧ. ಕಾಂಗ್ರೆಸ್ ಪಕ್ಷದವರಿಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ. ಧಿಕ್ಕರಿಸುವ ಶಕ್ತಿಯೂ ಇಲ್ಲ. ತಮಿಳುನಾಡು ಸರ್ಕಾರವನ್ನು ಧಿಕ್ಕರಿಸಿ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಮುಂದಾದರೆ ಅದು ಸಾಧ್ಯವಾಗುತ್ತದೆ. ಕಾಂಗ್ರೆಸ್ ಕೈಯಲ್ಲಿ ಅದು ಸಾಧ್ಯವಿಲ್ಲ ಎಂದರು.

ತಮಿಳುನಾಡು ಸರ್ಕಾರವನ್ನು ಒಪ್ಪಿಸದೆ ಮೇಕೆದಾಟು ಯೋಜನೆಯ ಕಚೇರಿ ತೆರೆದರೆ ಏನು ಪ್ರಯೋಜನ? ಮೇಕೆದಾಟು ಯೋಜನೆ ಜಾರಿಗೊಳಿಸುತ್ತೇವೆ ಎಂದು ಹೇಳಿದವರು ಕಾಂಗ್ರೆಸ್​​ನವರೇ ವಿನಹ ನಾನಲ್ಲ. ಯೋಜನೆ ಮಾಡುತ್ತೇವೆ ಎಂದು ಜನರಿಗೆ ಭರವಸೆ ನೀಡಿದವರು ಮಾಡಬೇಕು ತಾನೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಮೇಕೆದಾಟು ಯೋಜನೆ ಹೆಸರು ಹೇಳಿಕೊಂಡು ಎರಡೂವರೆ ವರ್ಷದಿಂದ ಸುಮ್ಮನೆ ಸಮಯ ಹಾಳು ಮಾಡುತ್ತಿದ್ದಾರೆ ಅಷ್ಟೇ. ಸುಮ್ಮನೆ ನನ್ನ ಮೇಲೆ ಜವಾಬ್ದಾರಿ ಹೊರಿಸಿದರೆ ನಾನು ಹೇಗೆ ಮಾಡಲು ಸಾಧ್ಯ ಎಂದು ಅವರು ಪ್ರಶ್ನಿಸಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow