ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ: ರಾಜ್ಯಪಾಲರಿಂದ ಅನುಮೋದನೆ!

ಫೆಬ್ರವರಿ 12, 2025 - 17:55
ಫೆಬ್ರವರಿ 12, 2025 - 17:40
 0  15
ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ: ರಾಜ್ಯಪಾಲರಿಂದ ಅನುಮೋದನೆ!

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಅಂಕುಶ ಹಾಕುವ ಸುಗ್ರೀವಾಜ್ಞೆಗೆ ಅಂಕಿತ ಹಾಕದೇ ಹೆಚ್ಚಿನ ಸ್ಪಷ್ಟನೆ ಕೋರಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದರು. ಕರ್ನಾಟಕ ಮೈಕ್ರೋ ಫೈನಾನ್ಸ್‌ (ಬಲವಂತ ಕ್ರಮಗಳ ನಿಯಂತ್ರಣ) ಸುಗ್ರೀವಾಜ್ಞೆ-2025 ಕರಡನ್ನು ಕಳೆದ ವಾರ ರಾಜ್ಯಪಾಲರ ಅಂಕಿತಕ್ಕಾಗಿ ಕಳುಹಿಸಿಕೊಡಲಾಗಿತ್ತು. ಇದೀಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಅಂಕಿತ ಸೂಚಿಸಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಜಾರಿಗೊಂಡತೆ ಆಗಿದೆ. ಇದರಿಂದ ಮೈಕ್ರೋ ಫೈನಾನ್ಸ್ ಮಾಲೀಕರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ.

ಹೌದು ಹಲವು ಸಲಹೆಗಳನ್ನು ನೀಡಿ ರಾಜ್ಯಪಾಲರು ಸುಗ್ರೀವಾಜ್ಞೆಗೆ ಅನುಮೋದನೆ ನೀಡಿದ್ದಾರೆ. ಸುಗ್ರೀವಾಜ್ಞೆ ಜಾರಿಗೆ ಕುರಿತಂತೆ ಹಲವು ಸೂಚನೆಗಳನ್ನು ನೀಡಿರುವ ರಾಜ್ಯಪಾಲರು, ಈ ವಿಷಯದ ಕುರಿತು ಅಧಿವೇಶನದಲ್ಲಿ ಚರ್ಚಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಜಾರಿ ಆಗಿದ್ದು ಈ ಒಂದು ಸುಗ್ರೀವಾಜ್ಞೆಗೆ ರಾಜ್ಯಪಾಲರು ಇದೀಗ ಅಂಕಿತ ಹಾಕಿದ್ದಾರೆ. 

3 ಎಚ್ಚರಿಕೆ (ನಿಬಂಧನೆ) ಒಳಪಟ್ಟು ಸುಗ್ರೀವಾಜ್ಞೆಗೆ ಅನುಮೋದನೆ ನೀಡಿದ ರಾಜ್ಯಪಾಲರು

# ಆರ್ ಬಿಐ ಅಡಿ ನೋಂದಾಯಿತ,ಸಹಕಾರಿ,ಸಣ್ಣ ಹಣಕಾಸು ಸಂಸ್ಥೆಗಳಿಗೆ ವ್ಯಾಪಾರ ವ್ಯವಹಾರಕ್ಕೆ ಯಾವುದೇ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಬೇಕು.

#ಈಗಾಗಲೇ ಸಾಲ ನೀಡಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿದಾತರು ಈ ಸುಗ್ರೀವಾಜ್ಞೆಯಿಂದ ಅವರ ಸಾಲ,ಹಾಗೂ ಬಡ್ಡಿ ವಸೂಲಾತಿಗೆ ಅಡ್ಡಿಯಾಗಬಹುದು ಮತ್ತು ಕಾನೂನು ಹೋರಾಟಕ್ಕೆ ಆಸ್ಪದ ಕಲ್ಪಿಸಬಹುದು

# ಸಂವಿಧಾನದ ಕಲಂ ೧೯ ಮತ್ತು ೩೨ ಅಡಿ  ನೈಸರ್ಗಿಕ ನ್ಯಾಯ ಪಡೆಯಲು (Natural Justice) ಅವಕಾಶವಿದೆ.ಹೀಗಾಗಿ ಅವರ ಹಕ್ಕು ಮತ್ತು ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟಾಗದಂತೆ‌ ಎಚ್ಚರಿಕೆ ವಹಿಸಿ

ಈ ಸುಗ್ರೀವಾಜ್ಞೆಯನ್ನು ವಿಧಾನ ಮಂಡಲದಲ್ಲಿ ಚರ್ಚಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ. ಇದರಿಂದ ಮೈಕ್ರೋ ಫೈನಾನ್ಸ್ ಕ್ಷೇತ್ರದಲ್ಲಿ ಹೊಸ ನಿಯಮಗಳು ಜಾರಿಗೆ ಬರುವ ಸಾಧ್ಯತೆಯಿದೆ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow