ಮೈಸೂರು ದಸರಾ 2024 ಯಾವಾಗ? ಈ ಬಾರಿಯ ವಿಶೇಷತೆ ಏನು? ಇತಿಹಾಸ ವೈಶಿಷ್ಟ್ಯ & ಕುತೂಹಲಕಾರಿ ಮಾಹಿತಿ ಇಲ್ಲಿದೆ

ಮೈಸೂರು ದಸರಾ 2024 ಯಾವಾಗ? ಈ ಬಾರಿಯ ವಿಶೇಷತೆ ಏನು? ಇತಿಹಾಸ ವೈಶಿಷ್ಟ್ಯ & ಕುತೂಹಲಕಾರಿ ಮಾಹಿತಿ ಇಲ್ಲಿದೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ನಾಡಹಬ್ಬಕ್ಕೆ ಮೈಸೂರಿನಲ್ಲಿ ಭರದಿಂದ ಸಿದ್ಧತೆ ನಡೆಸಲಾಗುತ್ತಿದ್ದು, ಗಜಪಡೆಗಳ ತಾಲೀಮು ಸಹ ಮುಂದುವರಿದಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಎರಡು ಬಾರಿ ಪೂರ್ವಸಿದ್ಧತಾ ಸಭೆ ನಡೆಸಿದ್ದರೆ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ಸಿ ಮಹದೇವಪ್ಪ ಕೂಡ ಕಳೆದ ವಾರ ದಸರಾ ಸಿದ್ಧತಾ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದ್ದಾರೆ.
2024ರ ದಸರಾ ಮಹೋತ್ಸವ ಅಕ್ಟೋಬರ್ 3ರಂದು ಆರಂಭಗೊಂಡು ಅದೇ ತಿಂಗಳ 12ರಂದು ಸಮಾರೋಪಗೊಳ್ಳಲಿದೆ ಎಂದು ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ಅಕ್ಟೋಬರ್ 3ರಂದು ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಬೆಳಗ್ಗೆ 9.15 ರಿಂದ 9.45ರ ಮುಹೂರ್ತದಲ್ಲಿ ದಸರಾ ಉದ್ಘಾಟನೆ ನೆರವೇರಲಿದೆ.
ಅಕ್ಟೋಬರ್ 3ರಂದು ಚಾಮುಂಡೇಶ್ವರಿ ದೇವಿಗೆ ನವರಾತ್ರಿಯ ಪ್ರಥಮ ಪೂಜೆ ನೆರವೇರಲಿದ್ದು, ನಂತರ 9 ದಿನಗಳ ಕಾಲ ದೇವಿಯ ಆರಾಧನೆ ನಡೆಯಲಿದೆ. ಅಕ್ಟೋಬರ್ 12ರಂದು ನವಮಿಯ ದಿನ ದುರ್ಗಾಷ್ಟಮಿ, ಮಹಾನವಮಿ, ಆಯುಧ, ಆನೆ ಮತ್ತು ಕುದುರೆ ಪೂಜೆ ನೆರವೇರಲಿದೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






