ಮೊದಲ ಬಾರಿಗೆ ಭಾವಿಪತ್ನಿ ಜೊತೆ ಕಾಣಿಸಿಕೊಂಡ ಸಂಸದ ತೇಜಸ್ವಿ ಸೂರ್ಯ..! ಭೇಟಿ ನೀಡಿದ್ದು ಎಲ್ಲಿಗೆ ಗೊತ್ತಾ..?

ಜನವರಿ 27, 2025 - 12:00
 0  11
ಮೊದಲ ಬಾರಿಗೆ ಭಾವಿಪತ್ನಿ ಜೊತೆ ಕಾಣಿಸಿಕೊಂಡ ಸಂಸದ ತೇಜಸ್ವಿ ಸೂರ್ಯ..! ಭೇಟಿ ನೀಡಿದ್ದು ಎಲ್ಲಿಗೆ ಗೊತ್ತಾ..?

ಬೆಂಗಳೂರು: ಮೋಸ್ಟ್ ಎಲಿಜಿಬಲ್ ಬ್ಯಾಚುಲರ್​ ಎನಿಸಿಕೊಂಡಿದ್ದ ಯುವ ರಾಜಕಾರಣಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ  ಶೀಘ್ರದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನುವುದು ಎಲ್ಲಾರಿಗೂ ಗೊತ್ತಿರುವ ವಿಚಾರ. ಅವರ ಮದುವೆ ಬಗ್ಗೆ ಈ ಹಿಂದೆ ಕೂಡ ಸುದ್ಧಿಗಳು ಹರಿದಾಡಿದ್ದವು. ಯಾವುದಕ್ಕೂ ತೇಜಸ್ವಿ ಸೂರ್ಯ ಅವರು ಮಾತನಾಡಿರಲಿಲ್ಲ. ಆದರೆ ಇದೀಗ ಚೆನ್ನೈ ಮೂಲದ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಕುಟುಂಬದ ಜತೆ ವಿವಾಹ ಮಾತುಕತೆ ನಡೆಯುತ್ತಿದೆ ಎನ್ನಲಾಗಿತ್ತು.

ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನ ಹೊರ ಹೊಲಯದಲ್ಲಿರುವ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ  ಸಂಸದ ತೇಜಸ್ವಿ ಸೂರ್ಯ ಅವರು ತಮ್ಮ ಭಾವಿಪತ್ನಿ ಸಿವಶ್ರೀ ಸ್ಕಂದ ಪ್ರಸಾದ್ ಜೊತೆ ಸೇರಿ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಆಶೀರ್ವಾದ ಪಡೆದುಕೊಂಡಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಅವರು ಚೆನ್ನೈ ಮೂಲದ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರನ್ನು ವರಿಸಲಿದ್ದಾರೆ. ರಾಮಮಂದಿರ ಉದ್ಘಾಟನೆ ವೇಳೆ ಪೂಜಿಸಲೆಂದೇ ಹೂಗಳ ತಂದೆ ಹಾಡಿನ ಮೂಲಕ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆಗೆ ಶಿವಶ್ರೀ ಸ್ಕಂದ ಪ್ರಸಾದ್ ಪಾತ್ರವಾಗಿದ್ದರು. ಸದ್ಯ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದ ಪ್ರಸಾದ್ ಕುಟುಂಬದ ನಡುವೆ ವಿವಾಹ ಮಾತುಕತೆ ನಡೆಯುತ್ತಿದೆ.

ಮಾಹಿತಿ ಪ್ರಕಾರ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದ ಪ್ರಸಾದ್ ಅವರ ಮದುವೆ ಮಾರ್ಚ್ 4,2025 ರಂದು ನಿಗದಿಯಾಗಿದೆ ಎನ್ನಲಾಗುತ್ತಿದೆ. ಅಧಿಕೃತ ಪ್ರಕಟಣೆ ಹೊರಡಿಸದಿದ್ದರೂ, ಎರಡೂ ಕುಟುಂಬಗಳು ಈ ಮದುವೆಗೆ ಒಪ್ಪಿಗೆ ಸೂಚಿಸಿರುವುದಾಗಿ ವರದಿಯಾಗಿದೆ. ಬೆಂಗಳೂರಿನಲ್ಲಿ ಮದುವೆ ಸಮಾರಂಭಕ್ಕೆ ಸಿದ್ಧತೆಗಳು ನಡೆಯುತ್ತಿವೆ ಎಂದು ಹೇಳಲಾಗುತ್ತಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow