ಮೋದಿ ಉದ್ಘಾಟಿಸಿದ್ದ ಶಿವಾಜಿ ಮಹರಾಜ್ ಪ್ರತಿಮೆ 1 ವರ್ಷ ಪೂರ್ಣಗೊಳ್ಳುವ ಮುನ್ನವೇ ಕುಸಿತ!

ಮೋದಿ ಉದ್ಘಾಟಿಸಿದ್ದ ಶಿವಾಜಿ ಮಹರಾಜ್ ಪ್ರತಿಮೆ 1 ವರ್ಷ ಪೂರ್ಣಗೊಳ್ಳುವ ಮುನ್ನವೇ ಕುಸಿತ!
ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ರಾಜ್‌ಕೋಟ್ ಕೋಟೆಯಲ್ಲಿ ಕಳೆದ ವರ್ಷ ಪ್ರಧಾನಿ ಮೋದಿ (PM Modi) ಅವರು ಅನಾವರಣಗೊಳಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ (Shivaji Maharaj Statue) ಸೋಮವಾರ (ಆ.26) ಕುಸಿದು ಬಿದ್ದಿದೆ. 2023ರ ಡಿಸೆಂಬರ್ 4ರಂದು ಭಾರತೀಯ ನೌಕಾಪಡೆಯ ದಿನಾಚರಣೆ ವೇಳೆ ಪ್ರಧಾನಿ ಮೋದಿ ಈ ಭವ್ಯ ಪ್ರತಿಮೆಯನ್ನು ಮೋದಿ ಅನಾವರಣಗೊಳಿಸಿದ್ದರು.
ಮಾಲ್ವಾನ್‌ನ ರಾಜ್‌ಕೋಟ್ ಕೋಟೆಯಲ್ಲಿ ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮರಾಠ ರಾಜನ 35 ಅಡಿ ಉದ್ದದ ಪ್ರತಿಮೆ ಕುಸಿದಿದುಬಿದ್ದಿದೆ. ಪೊಲೀಸ್ ಮತ್ತು ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ.
ಈ ಬೆನ್ನಲ್ಲೇ ತಜ್ಞರು ಪ್ರತಿಮೆ ಕುಸಿತಕ್ಕೆ ನಿಖರ ಕಾರಣ ತಿಳಿಸಿದ್ದಾರೆ. ಕಳೆದ ಎರಡ್ಮೂರು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ, ಬಿರುಗಾಳಿ ಬೀಸುತ್ತಿದೆ. ಇದರಿಂದಾಗಿ ಪ್ರತಿಮೆ ಧ್ವಂಸವಾಗಿದೆ ಎಂದು ಹೇಳಿದ್ದಾರೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






