ಮೋದಿ ಸುಲಭವಾಗಿ ಬಗ್ಗುವ ವ್ಯಕ್ತಿಯಲ್ಲ, ಆದ್ರೂ ಶೀಘ್ರವೇ ಭಾರತದ ಜೊತೆ ವ್ಯಾಪಾರ ಒಪ್ಪಂದ: ಟ್ರಂಪ್ ಸುಳಿವು
ಟ್ರಂಪ್ ಮತ್ತೆ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ನಿಲ್ಲಿಸಿದ್ದೇನೆ ಎಂದು ಹೇಳುವ ಮೂಲಕ ಮತ್ತೆ ತನ್ನ ಬೆನ್ನನ್ನು ತಟ್ಟುವ ಕೆಲಸವನ್ನು ಮುಂದುವರಿಸಿದ್ದಾರೆ.
ಪ್ರಧಾನಿ ಮೋದಿಯವರ ಬಗ್ಗೆ ನನಗೆ ಅಪಾರ ಗೌರವ ಮತ್ತು ಪ್ರೀತಿ ಇದೆ. ನಮಗೆ ಉತ್ತಮ ಸಂಬಂಧವಿದೆ. ಅದೇ ರೀತಿ, ಪಾಕಿಸ್ತಾನದ ಪ್ರಧಾನಿ ಒಬ್ಬ ಉತ್ತಮ ವ್ಯಕ್ತಿ. ಅವರಲ್ಲಿ ಫೀಲ್ಡ್ ಮಾರ್ಷಲ್ ಇದ್ದಾರೆ. ಅವರು ಫೀಲ್ಡ್ ಮಾರ್ಷಲ್ ಯಾಕೆ ಎನ್ನುವುದು ನಿಮಗೆ ತಿಳಿದಿದ್ಯಾ? ಅವರು ಒಬ್ಬ ಉತ್ತಮ ಹೋರಾಟಗಾರ ಎಂದರು.
ನಿಮ್ಮ ಪ್ರತಿಕ್ರಿಯೆ ಏನು?