ಯಶ್ ಅಭಿಮಾನಿಗಳಿಗೆ ಸಿಕ್ತು ಗುಡ್ ನ್ಯೂಸ್: Y Boss ಹುಟ್ಟುಹಬ್ಬದ ಗಿಫ್ಟ್ ಅಂತೆ ಇದು!

ಕೆಜಿಎಫ್ 2 ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಪಡೆದ ಬಳಿಕ ನಟ ಯಶ್ ಅವರು ಮುಂದಿನ ಸಿನಿಮಾ ಯಾವುದು, ಯಾರ ಜೊತೆ ಸಿನಿಮಾ ಮಾಡ್ತಾರೆ ಎನ್ನುವ ಕುತೂಹಲ ಹೆಚ್ಚಾಗಿತ್ತು. ಎರಡು ವರ್ಷಗಳ ಬಳಿಕ ಕೊನೆಗೂ ಯಶ್ 2023ರ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮುಂದಿನ ಸಿನಿಮಾ ಟೈಟಲ್ ಘೋಷಣೆ ಮಾಡಿದ್ದರು. ಟೈಟಲ್ ಅನೌನ್ಸ್ ಮಾಡಿದ್ದು ಬಿಟ್ಟರೆ ಈವರೆಗೂ ಸಿನಿಮಾ ಬಗ್ಗೆ ಯಾವ ಮಾಹಿತಿಯೂ ಹೊರಬಂದಿಲ್ಲ. ಒಂದು ವರ್ಷ ಸತತ ಕಾಯುವಿಕೆ ಬಳಿಕ ಯಶ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ.
ಯಶ್, ಕೆಲ ವರ್ಷಗಳಿಂದ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಂಡಿಲ್ಲ. ಈ ವರ್ಷ ಫ್ಯಾನ್ಸ್ ಜೊತೆ ಬರ್ತ್ಡೇ ಆಚರಿಸಿಕೊಳ್ಳುತ್ತಾರೆ ಎನ್ನಲಾಗಿತ್ತು. ಆದರೆ ಈ ಬಾರಿಯೂ ಬ್ರೇಕ್ ಹಾಕಿರುವ ಯಶ್ ಕೆಲಸದ ನಿಮಿತ್ತ ವಿದೇಶಕ್ಕೆ ಹೋಗುತ್ತಿರುವ ಕಾರಣ ಬರ್ತ್ಡೇ ಮಾಡಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ.
ಟಾಕ್ಸಿಕ್ ಸಿನಿಮಾದಲ್ಲಿ ಯಶ್ ಅವರು ನಟಿಸುತ್ತಿರುವುದು ಗೊತ್ತಿರುವ ಸಂಗತಿಯೇ. ಯಶ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಅಭಿಮಾನಿಗಳಿಗಾಗಿ ಕಾಮನ್ ಡಿಪಿಯನ್ನು ಬಿಡುಗಡೆ ಮಾಡಲಾಗಿದೆ. ಈ ಮೂಲಕ ಅಭಿಮಾನಿಗಳಿಗೆ ಗಿಫ್ಟ್ ಕೊಟ್ಟಂತೆ ಆಗಿದೆ. ಇನ್ನು ಶೂಟಿಂಗ್ ಕಾರಣದಿಂದ ಯಶ್ ವಿದೇಶಕ್ಕೆ ತೆರಳುತ್ತಿದ್ದಾರೆ. ಹೀಗಾಗಿ ಈ ಸಲನೂ ಹುಟ್ಟುಹಬ್ಬ ಮಾಡಿಕೊಳ್ಳುತ್ತಿಲ್ಲ ಎಂಬುದು ಖಚಿತವಾಗಿದೆ.
ಆದರೂ ಫೇವರಿಟ್ ನಟನ ಹುಟ್ಟುಹಬ್ಬ ಆಚರಿಸಲು ಅಭಿಮಾನಿಗಳು ಸಕಲ ಸಿದ್ಧತೆ ನಡೆಸಿದ್ದಾರೆ. ರಾಜ್ಯಾದ್ಯಂತ ಸಾಮಾಜಿಕ ಕಾರ್ಯಗಳ ಮೂಲಕ ಅರ್ಥಪೂರ್ಣ ಹುಟ್ಟುಹಬ್ಬ ಆಚರಿಸೋಕೆ ಮುಂದಾಗಿದ್ದಾರೆ. ಯಶ್ ಬರ್ತ್ಡೇ ದಿನವೇ ಟಾಕ್ಸಿಕ್ ಮೂವಿಯ ಟೀಸರ್ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






