ಯುಗಾದಿ, ರಂಜಾನ್ ಹಬ್ಬಕ್ಕೆ ಬೆಂಗಳೂರಿನಿಂದ 2000 ವಿಶೇಷ ಬಸ್‌ ವ್ಯವಸ್ಥೆ: ಮುಂಗಡ ಬುಕ್ಕಿಂಗ್‌ʼಗೆ ಡಿಸ್ಕೌಂಟ್‌

ಮಾರ್ಚ್ 28, 2025 - 11:59
 0  8
ಯುಗಾದಿ, ರಂಜಾನ್ ಹಬ್ಬಕ್ಕೆ ಬೆಂಗಳೂರಿನಿಂದ 2000 ವಿಶೇಷ ಬಸ್‌ ವ್ಯವಸ್ಥೆ: ಮುಂಗಡ ಬುಕ್ಕಿಂಗ್‌ʼಗೆ ಡಿಸ್ಕೌಂಟ್‌

 

ಬೆಂಗಳೂರು: ಈ ಬಾರಿ ಈಡ್‌ ಹಾಗೂ ಯುಗಾದಿ ಹಬ್ಬಗಳು ಒಂದರ ಹಿಂದೆ ಒಂದರಂತೆ ಬಂದಿದ್ದು, ಇದಕ್ಕಾಗಿ ಈ ವಾರಾತ್ಯಂದಲ್ಲಿಯೇ ಬೆಂಗಳೂರಿನಿಂದ ತಮ್ಮ ತಮ್ಮ ಊರಿಗಳಿಗೆ ಪ್ರಯಾಣಿಸಲು ಜನರು ಸಜ್ಜಾಗಿದ್ದಾರೆ. ಆದ್ದರಿಂದ ಯುಗಾದಿ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ ವತಿಯಿಂದ 2,000 ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಈ ವಿಶೇಷ ಬಸ್‌ಗಳು ಮಾರ್ಚ್‌ 28, 29 ಹಾಗೂ 30 ರಂದು ಮೂರು ದಿನ ಬೆಂಗಳೂರಿನಿಂದ ರಾಜ್ಯ, ಹೊರ ರಾಜ್ಯದ ಪ್ರಮುಖ ಸ್ಥಳಗಳಿಗೆ ಸಂಚಾರ ನಡೆಸಲಿವೆ.

ಈ ಬಗ್ಗೆ ಕೆಎಸ್‌ಆರ್‌ಟಿಸಿ ಪ್ರಕಟಣೆ ನೀಡಿದ್ದು, ಮಾರ್ಚ್‌ 30 ರಂದು ಚಂದ್ರಮಾನ ಯುಗಾದಿ, ಮಾರ್ಚ್‌ 31 ರಂದು ರಂಜಾನ್ ಹಬ್ಬವಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿನಿಂದ ಪ್ರಯಾಣಿಕರು ತಮ್ಮ ಊರುಗಳಿಗೆ ಸಂಚಾರ ನಡೆಸುತ್ತಾರೆ. ಇವರ ಅನುಕೂಲಕ್ಕಾಗಿ ವಿಶೇಷ ಬಸ್‌ ವ್ಯವಸ್ಥೆ ಮಾಡಲಾಗಿದೆ. ಈ ಹೆಚ್ಚುವರಿ ಬಸ್‌ಗಳು ಮೆಜೆಸ್ಟಿಕ್, ಶಾಂತಿನಗರ, ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ನಡೆಸಲಿವೆ. 

ಮೆಜೆಸ್ಟಿಕ್‌ನಿಂದ…
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಈ ವಿಶೇಷ ಬಸ್‌ ಸಂಚರಿಸಲಿವೆ.

ಶಾಂತಿನಗರ ಬಸ್ ನಿಲ್ದಾಣದಿಂದ
ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಝಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ವಿಶೇಷ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ.

ಮುಂಗಾಡ ಬುಕ್ಕಿಂಗ್​​ ಶೇ 10 ರಷ್ಟು ಡಿಸ್ಕೌಂಟ್

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow