ಯುಗಾದಿ ಹಬ್ಬದ ದಿನವೇ ರೌಡಿಶೀಟರ್ ಬರ್ಬರ ಹತ್ಯೆ..! ಬೆಚ್ಚಿಬಿದ್ದ ಜನತೆ

ಆನೇಕಲ್: ಯುಗಾದಿ ಹಬ್ಬದ ದಿನವೇ ರೌಡಿಶೀಟರ್ ಒಬ್ಬನ ಬರ್ಬರ ಹತ್ಯೆಯಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಗೊಲ್ಲಹಳ್ಳಿ ಬಳಿ ನಡೆದಿದೆ. ಮಂಜ ಅಲಿಯಾಸ್ ನೇಪಾಳಿ ಮಂಜ ಹತ್ಯೆಯಾದ ರೌಡಿಶೀಟರ್ ಆಗಿದ್ದು, ಹಬ್ಬದ ದಿನ ಎಣ್ಣೆ ಪಾರ್ಟಿಗೆ ಹೋಗಿದ್ದ ವೇಳೆ ರಡು ಬೈಕ್‍ನಲ್ಲಿ ಬಂದ ಹಂತಕರ ಗುಂಪು ಆತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಹಳೇ ದ್ವೇಷದ ಹಿನ್ನೆಲೆ ಹೆಬ್ಬಗೋಡಿ ರೌಡಿಶೀಟರ್ ಜಗ್ಗ ಅಲಿಯಾಸ್ ಜಗದೀಶ್ ಮತ್ತವನ ಗ್ಯಾಂಗ್ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಲಾಂಗು ಮಚ್ಚುಗಳಿಂದ ತಲೆ, ಹೊಟ್ಟೆ, ಎದೆ ಕೈಗಳು ಹೀಗೆ ಸಿಕ್ಕ ಸಿಕ್ಕ ಕಡೆ ಹಲ್ಲೆ ನಡೆಸಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.
ಎರಡು ಕೊಲೆ ಸೇರಿದಂತೆ ಕೊಲೆ ಯತ್ನ, ದರೋಡೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಮೃತ ನೇಪಾಳಿ ಮಂಜ ಪ್ರಮುಖ ಆರೋಪಿಯಾಗಿದ್ದ. ಎರಡು ಬಾರಿ ಗೂಂಡಾ ಕಾಯ್ದೆ ಅಡಿ ಆತನನ್ನು ಬಂಧಿಸಲಾಗಿತ್ತು. ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






