ಯುವತಿಗೆ ಬಸ್ಸಿನಲ್ಲೇ ಲೈಂಗಿಕ ಕಿರುಕುಳ: ಪೊಲೀಸರ ಬಲೆಗೆ ಬಿದ್ದ ಕಂಡಕ್ಟರ್!

ಮಂಗಳೂರು:- ಯುವತಿಗೆ ಬಸ್ಸಿನಲ್ಲೇ ಲೈಂಗಿಕ ಕಿರುಕುಳ ಕೊಟ್ಟ ಹಿನ್ನೆಲೆ ಕಂಡಕ್ಟರ್ ಓರ್ವರು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಮಂಗಳೂರಿನಲ್ಲಿ ಜರುಗಿದೆ.
ಮಂಗಳೂರಿನ ಮುಡಿಪು -ಸ್ಟೇಟ್ ಬ್ಯಾಂಕ್ ಭಾಗದ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ನಿರ್ವಾಹಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ವರದಿಯಾಗಿದ್ದು, ಪ್ರಯಾಣಿಕರೊಬ್ಬರು ಮಾಡಿರುವ ವಿಡಿಯೋ ವೈರಲ್ ಆಗಿದೆ.
40 ವರ್ಷದ ಪ್ರದೀಪ್ ಬಂಧಿತ ಆರೋಪಿ. ಈತ ಬಾಗಲಕೋಟೆ ಮೂಲದವ ಎಂದು ತಿಳಿದು ಬಂದಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಏಪ್ರಿಲ್ 22 ರಂದು ಮುಡಿಪುವಿನಿಂದ ಸ್ಟೇಟ್ ಬ್ಯಾಂಕ್ನತ್ತ ತೆರಳುತ್ತಿದ್ದ ಬಸ್ನಲ್ಲಿ ಯುವತಿ ನಿದ್ರೆಗೆ ಜಾರಿದ್ದರು. ಆ ಸಂದರ್ಭದಲ್ಲಿ ಕಂಡಕ್ಟರ್ ಆ ಯುವತಿಗೆ ಕಿರುಕುಳ ನೀಡಿದ್ದಾನೆ. ಇದನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಈ ಬೆನ್ನಲ್ಲೇ ಪೊಲೀಸರು, ತನಿಖೆ ಕೈಗೊಂಡು ಅರೆಸ್ಟ್ ಮಾಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






