ರನ್ ಮಷಿನ್ ವಿರಾಟ್ ಕೊಹ್ಲಿಯ ವಿಶ್ವದಾಖಲೆ ಮೇಲೆ ಕಣ್ಣಿಟ್ಟ ಇಂಗ್ಲೆಂಡ್ ಆಟಗಾರ!

ಅಕ್ಟೋಬರ್ 11, 2024 - 09:02
 0  12
ರನ್ ಮಷಿನ್ ವಿರಾಟ್ ಕೊಹ್ಲಿಯ ವಿಶ್ವದಾಖಲೆ ಮೇಲೆ ಕಣ್ಣಿಟ್ಟ ಇಂಗ್ಲೆಂಡ್ ಆಟಗಾರ!

ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಯ ವಿಶ್ವ ದಾಖಲೆ ಪಟ್ಟಿಗೆ ಜೋ ರೂಟ್ ಎಂಟ್ರಿ ಕೊಟ್ಟಿದ್ದಾರೆ. 

ಮುಲ್ತಾನ್​​ನಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ದಾಂಡಿಗ ಜೋ ರೂಟ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರೂಟ್ 4ನೇ ದಿನದಾಟದ ಭೋಜನಾ ವಿರಾಮದ ವೇಳೆಗೆ ಅಜೇಯ 259 ರನ್ ಬಾರಿಸಿದ್ದಾರೆ.

ಈ  ಭರ್ಜರಿ ದ್ವಿಶತಕದೊಂದಿಗೆ ರೂಟ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 20 ಸಾವಿರ ರನ್ ಪೂರೈಸಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಇಂಗ್ಲೆಂಡ್​ನ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದರ ಜೊತೆಗೆ ಸಕ್ರಿಯ ಬ್ಯಾಟರ್​ಗಳ ಪಟ್ಟಿಯಲ್ಲಿ ಈ ಮೈಲುಗಲ್ಲು ದಾಟಿದ 2ನೇ ದಾಂಡಿಗ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಪ್ರಸ್ತುತ ಆಡುತ್ತಿರುವ ಆಟಗಾರರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 20 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇಂಟರ್​ನ್ಯಾಷನಲ್ ಕ್ರಿಕೆಟ್​ನಲ್ಲಿ 595 ಇನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ 80 ಶತಕಗಳೊಂದಿಗೆ ಒಟ್ಟು 27041 ರನ್​ ಕಲೆಹಾಕಿದ್ದಾರೆ

ಇದೀಗ 20 ಸಾವಿರ ರನ್​ಗಳಿಸಿದ ಸಕ್ರಿಯ ಬ್ಯಾಟರ್​ಗಳ ಪಟ್ಟಿಗೆ ಜೋ ರೂಟ್ ಕೂಡ ಎಂಟ್ರಿ ಕೊಟ್ಟಿದ್ದಾರೆ. 2012 ರಿಂದ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡುತ್ತಿರುವ ರೂಟ್ ಒಟ್ಟು 457 ಇನಿಂಗ್ಸ್​ಗಳಿಂದ 20,000* ರನ್ ಕಲೆಹಾಕಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ 2ನೇ ಆ್ಯಕ್ಟೀವ್ ಪ್ಲೇಯರ್ ಎನಿಸಿಕೊಂಡಿದ್ದಾರೆ.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow