ರನ್ಯಾ ರಾವ್’ಗೂ, ಸಿದ್ಧಾರ್ಥ ಮೆಡಿಕಲ್ ಕಾಲೇಜಿಗೂ ಏನು ಸಂಬಂಧ? ಮುಂದುವರಿದ ED ಶೋಧ

ಬೆಂಗಳೂರು: ನಿನ್ನೆ ಗೃಹ ಸಚಿವ ಜಿ ಪರಮೇಶ್ವರ್ ಒಡೆತನದ ಸಿದ್ಧಾರ್ಥ ಕಾಲೇಜಿನ ಮೇಲೆ ಇಡಿ ದಾಳಿ ನಡೆದಿತ್ತು. ಇದೀಗ ಇಂದು ಕೂಡ ದಾಳಿ ಮುಂದುವರೆದಿದೆ. ದಾಳಿ ನಡೆಸಿ 24 ಗಂಟೆಗಳು ಕಳೆದರೂ ಇಡಿ ಅಧಿಕಾರಿಗಳ ಶೋಧ ಕಾರ್ಯ ಮುಂದುವರಿದಿದೆ.
ಈ ಮಧ್ಯೆ, ಅಕ್ರಮ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್ ಖಾತೆಗೆ 40 ಲಕ್ಷ ರೂಪಾಯಿ ವರ್ಗಾವಣೆ ಮಾಡಿರುವ ಆರೋಪದ ಮೇಲೆ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಪ್ರಭಾವಿ ವ್ಯಕ್ತಿಯೊಬ್ಬರ ಸೂಚನೆ ಮೇರೆಗೆ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಟ್ರಸ್ಟ್ ಮೂಲಕ ರನ್ಯಾ ರಾವ್ ಕ್ರೆಡಿಟ್ ಕಾರ್ಡ್ಗೆ 40 ಲಕ್ಷ ರೂಪಾಯಿ ವರ್ಗಾವಣೆ ಮಾಡಲಾಗಿತ್ತು ಎಂಬ ಆರೋಪವಿದೆ. ಇದರ ಆಧಾರದಲ್ಲಿ ಒಟ್ಟು 16 ಕಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಡಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಿಮ್ಮ ಪ್ರತಿಕ್ರಿಯೆ ಏನು?






