ರಸ್ತೆ ಬದಿ ನಿಂತಿದ್ದ ವಾಹನಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆಗೆ ಶರಣು..!

ಬೆಂಗಳೂರು: ಬೆಂಗಳೂರಿನ ಚಿಕ್ಕಗೊಲ್ಲರ ಹಟ್ಟಿಯ ಅಭಿನಯ ಸ್ಕೂಲ್ ರಸ್ತೆಯಲ್ಲಿ ರಸ್ತೆ ಬದಿ ನಿಂತಿದ್ದ ವಾಹನಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸುಂಕದಕಟ್ಟೆ ನಿವಾಸಿ ನವೀನ್ ಮೃತ ಯುವಕನಾಗಿದ್ದಾನೆ.
ತನ್ನ ಶರ್ಟ್ ನಿಂದಲೇ ಜೆನ್ ಸೆಟ್ ಲಾರಿಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಸ್ಥಳದಲ್ಲೇ ತೀರ್ವ ರಕ್ತಸ್ರಾವವಾಗಿದ್ದು, ಬಾಟೆಲ್ ಕೂಡ ಬಿದ್ದಿದೆ. ಬಾಟಲ್ ನಿಂದ ಕತ್ತು ಕುಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ. ಮೆಲ್ನೋಟಕ್ಕೆ ಆತ್ಮಹತ್ಯೆ ಎಂಬ ಶಂಕೆ ವ್ಯಕ್ತವಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






