ರಾಗಿ ಮುದ್ದೆಗೆ ನಿದ್ರೆ ಮಾತ್ರೆ ಹಾಕಿ ಅತ್ತೆ ಕೊಲೆ ಕೇಸ್: ಸೊಸೆ-ಪ್ರಿಯಕರ ಅರೆಸ್ಟ್!
ಚಿಕ್ಕಮಗಳೂರು:- ಅಜ್ಜಂಪುರ ಪೊಲೀಸರು ತನಿಖೆ ಚುರುಕುಗೊಳಿಸಿ ರಾಗಿ ಮುದ್ದೆಯಲ್ಲಿ ನಿದ್ರೆ ಮಾತ್ರೆ ಹಾಕಿ ಅತ್ತೆಯನ್ನು ಕೊಲೆ ಮಾಡಿದ್ದ ಸೊಸೆ ಹಾಗೂ ಆಕೆಯ ಪ್ರಿಯಕರನನ್ನು ಅರೆಸ್ಟ್ ಮಾಡಿದ್ದಾರೆ.
ಆಶ್ವಿನಿ ಹಾಗೂ ಆಂಜನೇಯ ಬಂಧಿತರು. ಆರೋಪಿಗಳು ಆ.10 ರಂದು ಮುದ್ದೆಯಲ್ಲಿ ನಿದ್ರೆ ಮಾತ್ರೆ ಹಾಕಿ ಅತ್ತೆ ದೇವಿರಮ್ಮಳನ್ನು ಕೊಂದಿದ್ದರು. ಬಳಿಕ ಮನೆಯಲ್ಲಿ ಹಣ ಕದ್ದಿದ್ದರು. ಆರಂಭದಲ್ಲಿ ಕುಟುಂಬಸ್ಥರು ಸಹಜ ಸಾವು ಎಂದು ಅಂತ್ಯಸಂಸ್ಕಾರ ಮಾಡಿ ಮುಗಿಸಿದ್ದರು. ಆದರೆ ಹಣ ಕಳ್ಳತನ ಆಗಿದ್ದು ಗಮನಿಸಿ, ಪೊಲೀಸರಿಗೆ ದೂರು ನೀಡಿದ್ದರು. ಇದರಿಂದ ಅನುಮಾನಗೊಂಡ ಪೊಲೀಸರು, ಸೊಸೆಯ ವಿಚಾರಣೆ ನಡೆಸಿದ್ದರು. ಈ ವೇಳೆ ನಿದ್ರೆ ಮಾತ್ರೆ ಹಾಕಿ ಕೊಲೆ ಮಾಡಿರುವುದು ಗೊತ್ತಾಗಿದೆ. ಆ.28ರಂದು ಹೂತ ಶವ ಹೊರತೆಗೆದು, ಮರಣೋತ್ತರ ಪರೀಕ್ಷೆ ನಡೆಸುವ ಸಾಧ್ಯತೆ ಇದೆ.
ನಿಮ್ಮ ಪ್ರತಿಕ್ರಿಯೆ ಏನು?