ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಭ್ರಷ್ಟಾಚಾರ, ಹಗರಣಗಳಲ್ಲಿ ಮುಳುಗಿದೆ: ಪ್ರಲ್ಹಾದ್ ಜೋಶಿ

ನವೆಂಬರ್ 8, 2024 - 18:00
 0  8
ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಭ್ರಷ್ಟಾಚಾರ, ಹಗರಣಗಳಲ್ಲಿ ಮುಳುಗಿದೆ: ಪ್ರಲ್ಹಾದ್ ಜೋಶಿ

ಸಂಡೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಭ್ರಷ್ಟಾಚಾರ, ಹಗರಣಗಳಲ್ಲಿ ಮುಳುಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಭ್ರಷ್ಟಾಚಾರ, ಹಗರಣಗಳಲ್ಲಿ ಮುಳುಗಿದೆ. ಮೂಡಾ, ವಾಲ್ಮೀಕಿ ಹಗರಣ, ಬೋಗಸ್ ಗ್ಯಾರೆಂಟಿಗಳಿಂದಾಗಿ ಸಿಎಂ ಸಿದ್ದರಾಮಯ್ಯ ಸರ್ಕಾರ ರಾಜ್ಯವನ್ನು ಆರ್ಥಿಕ ದಿವಾಳಿತನದತ್ತ ಕೊಂಡೊಯ್ಯುತ್ತಿದೆ.

ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಒಂದೂವರೆ ವರ್ಷದಲ್ಲಿ 70-80 ಸಾವಿರ ಕೋಟಿ ರೂಪಾಯಿ ಸಾಲದ ಹೊರೆ ಹೊತ್ತಿದೆ. ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮೂಲಕ ಅದನ್ನು ಸರಿದೂಗಿಸಲು ಹೆಣಗಾಡುತ್ತಿದೆ ಎಂದಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಎಲ್ಲೆಷ್ಟು ಜನರಿಗೆ ತಲುಪಿವೆ? ಅದರ ಆದಾಯದ ಮೂಲ, ವೆಚ್ಚ ಸಮಗ್ರ ಮಾಹಿತಿಯುಳ್ಳ ಶ್ವೇತ ಪತ್ರ ಹೊರಡಿಸಲಿ ಮೊದಲು ಎಂದು ಸಚಿವ ಜೋಶಿ ಆಗ್ರಹಿಸಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow