ರಾಜ್ಯ ಬಜೆಟ್ ಗೆ ದಿನಾಂಕ ಫಿಕ್ಸ್: CM ಸಿದ್ದರಾಮಯ್ಯ ಕೊಟ್ಟ ಮಾಹಿತಿ ಇಲ್ಲಿದೆ!

ಬೆಂಗಳೂರು:- ಕರ್ನಾಟಕ ಬಜೆಟ್ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳೊಂದಿಗೆ ಈಗಾಗಲೆ ಪೂರ್ವಭಾವಿ ಸಭೆ ನಡೆಸಿದ್ದಾರೆ. ಇಲಾಖೆಗಳಿಂದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
ಇಂದು ರೈತರು ಮತ್ತು ರೈತ ಸಂಘ-ಸಂಸ್ಥೆಗಳ ಜೊತೆ ಸಭೆ ನಡೆಸಿದ ಅವರು. “ಮುಖ್ಯಮಂತ್ರಿ ಸಿದ್ದರಾಮಯ್ಯ ಆದ ನಾನು ಸದಾ ರೈತ ಕುಲದ ಪರವಾಗಿ ಇರುತ್ತೇನೆ. ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ. ಅತಿ ಹೆಚ್ಚು ಉದ್ಯೋಗ ಅವಲಂಭನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆದ್ಯತೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಅಲ್ಲದೇ ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತದೆ. ಮಾರ್ಚ್ ಮಾರ್ಚ್ 7ರಂದು ಬಜೆಟ್ ಮಂಡಿಸುತ್ತೇನೆ. ಬಳಿಕ 3 ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು
ನಿಮ್ಮ ಪ್ರತಿಕ್ರಿಯೆ ಏನು?






