ರಾಜ್ಯ ಸರ್ಕಾರಕ್ಕೆ ಮತ್ತೊಂದು ಹಿನ್ನಡೆ.. ವಾಲ್ಮೀಕಿ ಹಗರಣ SIT ರದ್ದು ಮಾಡಿ CBI ಗೆ ವಹಿಸಿ ಹೈಕೋರ್ಟ್ ಆದೇಶ!

ಜುಲೈ 1, 2025 - 18:09
 0  15
ರಾಜ್ಯ ಸರ್ಕಾರಕ್ಕೆ ಮತ್ತೊಂದು ಹಿನ್ನಡೆ.. ವಾಲ್ಮೀಕಿ ಹಗರಣ SIT ರದ್ದು ಮಾಡಿ CBI ಗೆ ವಹಿಸಿ ಹೈಕೋರ್ಟ್ ಆದೇಶ!

ಬೆಂಗಳೂರು: ರಾಜ್ಯ ಸರ್ಕಾರದ ಕಾಲಿಗೆ ಹಗರಣದ ಸುಳಿ ಸುತ್ತಿಕೊಂಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರ ಆರೋಪ ಕೇಸ್ ಸರ್ಕಾರಕ್ಕೆ, ಅದ್ರಲ್ಲೂ ಸಿಎಂ ಸಿದ್ದರಾಮಯ್ಯಗೆ ತಲೆನೋವಾಗಿ ಪರಿಣಮಿಸಿತ್ತು. ಈ ಹಗರಣದ ತನಿಖೆಯನ್ನು ಇತ್ತೀಚೆಗೆ ಅಧಿಕೃತವಾಗಿ ಸರ್ಕಾರ ಎಸ್​ಐಟಿ ಮತ್ತು ಇಡಿ ವಹಿಸಿತ್ತು. ಇದೀಗ  ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕರ್ನಾಟಕ ಹೈಕೋರ್ಟ್ ಎಸ್​ಐಟಿಗೆ ಆದೇಶ ನೀಡಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಯೂನಿಯನ್​ ಬ್ಯಾಂಕ್​ ಆಫ್​ ಇಂಡಿಯಾ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು.

 ಈ ಪ್ರಕರಣದಲ್ಲಿ ಹಣ ದುರುಪಯೋಗದ ಆರೋಪಗಳಿದ್ದು, ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಬ್ಯಾಂಕ್ ಮನವಿ ಮಾಡಿತ್ತು. ಆದರೆ, ಹೈಕೋರ್ಟ್​ ಈ ಮನವಿಯನ್ನು ತಿರಸ್ಕರಿಸಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ 187 ಕೋಟಿ ರೂ. ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ಬಹಿರಂಗವಾಗಿತ್ತು.

187 ಕೋಟಿ ರೂಪಾಯಿಯಲ್ಲಿ 94 ಕೋಟಿ ಹೈದರಾಬಾದ್​ ಬ್ಯಾಂಕ್​ಗೆ ಅಂದರೆ, ಹೈದರಾಬಾದ್​ನ ಫಸ್ಟ್​ ಬ್ಯಾಂಕ್​​ಗೆ ವರ್ಗಾಯಿಸಲಾಗಿತ್ತು. ಫಸ್ಟ್​ ಬ್ಯಾಂಕ್​ನ ಭರ್ತಿ 18 ನಕಲಿ ಖಾತೆಗಳಿಗೆ 94 ಕೋಟಿ ರೂಪಾಯಿ ವರ್ಗಾವಣೆ ಆಗಿತ್ತು. ಇದೆಲ್ಲವೂ ಮಾಜಿ ಸಚಿವ ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್​ ಹಾಗೂ ಆಂಧ್ರದ ನಾಗೇಶ್ವರ್ ರಾವ್ ಸೂಚನೆಯಂತೆ ವರ್ಗಾವಣೆಯಾಗಿತ್ತು. ಹೀಗೆ ವರ್ಗಾವಣೆ ಆದ ಹಣವನ್ನು ಮಧ್ಯವರ್ತಿ ಸತ್ಯನಾರಾಣ ವರ್ಮಾ ಬಿಡಿಸಿಕೊಂಡಿದ್ದನು.

 ಈ 18 ನಕಲಿ ಖಾತೆಗಳಿಂದ ಬೇರೆ ಖಾತೆಗಳಿಗೆ 94 ಕೋಟಿ ರೂಪಾಯಿ ವರ್ಗಾವಣೆ ಮಾಡಲಾಗಿತ್ತು. ನೆಟ್​ ಬ್ಯಾಂಕಿಂಗ್​​, ಆರ್​​ಟಿಜಿಎಸ್, ಫೋನ್​ ಪೇ, ಗೂಗಲ್​ ಪೇ ಮೂಲಕ ಹಣವನ್ನು ವರ್ಗಾವಣೆ ಮಾಡಿ, ಆ ಹಣವನ್ನ ಸತ್ಯನಾರಾಯಣ ವರ್ಮಾ ಡ್ರಾ ಮಾಡಿಕೊಂಡು ನೆಕ್ಕಂಟಿ ನಾಗರಾಜ್, ನಾಗೇಶ್ವರ್ ರಾವ್ ಜತೆಗೂಡಿ ಹಣ ಹಂಚಿಕೆ ಮಾಡಿಕೊಂಡಿದ್ದರು. ಸದ್ಯ ಹೈಕೋರ್ಟ್​ ಸೂಚನೆ ಮೇರೆಗೆ ಪ್ರಕರಣದ ತನಿಖೆ ಸಿಬಿಐಗೆ ವರ್ಗಾವಣೆಯಾಗಲಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow