ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಕಡೆ ಭಾರಿ ಮಳೆ: ಹವಾಮಾನ ಇಲಾಖೆ
ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಕಡೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ,
ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಗೇರುಸೊಪ್ಪ, ಹೊನ್ನಾವರ, ಮಂಕಿ, ಶಿರಾಲಿ, ಗೋಕರ್ಣ, ಕುಮಟಾ, ಕಾರವಾರ, ಅಂಕೋಲಾ, ಹುಂಚದಕಟ್ಟೆ, ಭಾಗಮಂಡಲ, ಕದ್ರಾ, ಕ್ಯಾಸಲ್ರಾಕ್, ಕುಂದಾಪುರ, ಸಿದ್ದಾಪುರ, ಕೊಟ್ಟಿಗೆಹಾರ, ತ್ಯಾಗರ್ತಿ, ಬಂಟವಾಳ, ಬೆಳ್ತಂಗಡಿ, ಪುತ್ತೂರು, ಬನವಾಸಿ, ಧರ್ಮಸ್ಥಳ, ಕಮ್ಮರಡಿ, ಕೊಪ್ಪ, ಮಾಣಿ, ಮೂಡುಬಿದಿರೆಯಲ್ಲಿ ಮಳೆಯಾಗಿದೆ.
ಮುಲ್ಕಿ, ನಾಪೋಕ್ಲು, ಪೊನ್ನಂಪೇಟೆ, ಶಿಗ್ಗಾಂವ್, ಶೃಂಗೇರಿ, ಆಗುಂಬೆ, ಹಿರೇಕೆರೂರು, ಯಲ್ಲಾಪುರ, ಆಗುಂಬೆ, ಖಾನಾಪುರ, ಕಿರವತ್ತಿ, ಕೋಟಾ, ಲೋಂಡಾ, ಮಂಗಳೂರು, ಮಾನ್ವಿ, ಶಕ್ತಿನಗರದಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ. ಎಚ್ಎಎಲ್ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?