ರಾಜ್ಯದಲ್ಲಿ ಜೂನ್ 2ರವರೆಗೂ ಭಾರೀ ಮಳೆ: ಕರಾವಳಿ ಸೇರಿ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ - ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಮೇ 27, 2025 - 08:04
 0  11
ರಾಜ್ಯದಲ್ಲಿ ಜೂನ್ 2ರವರೆಗೂ ಭಾರೀ ಮಳೆ: ಕರಾವಳಿ ಸೇರಿ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ - ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಗೆ ಕರಾವಳಿ ಭಾಗದ ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾಶಾಲಾ-ಕಾಲೇಜುಗಳಿಗೆ ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ.

ಅದಲ್ಲದೆ ಕರ್ನಾಟಕದಾದ್ಯಂತ ಜೂನ್ 2ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಉತ್ತರ ಕನ್ನಡ, ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ಘೋಷಿಸಲಾಗಿದೆ. ತುಮಕೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್ಗೆ ಯೆಲ್ಲೋ ಅಲರ್ಟ್ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರೆಯಲಿದ್ದು, ಸಾಧಾರಣ ಮಳೆಯಾಗಲಿದೆ.

ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಿದೆ. ಇಂದು ಕರ್ನಾಟಕದ ಕರಾವಳಿ, ಕೊಡಗು, ಶಿವಮೊಗ್ಗ, ಹಾಸನ ಹಾಗೂ ಚಿಕ್ಕಮಗಳೂರಿನಲ್ಲಿ ಭಾರಿ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರೆಡ್ ಅಲರ್ಟ್ಘೋಷಿಸಲಾಗಿದೆ. ಬಾಗಲಕೋಟೆ, ಉತ್ತರ ಕನ್ನಡ, ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ಘೋಷಿಸಲಾಗಿದೆ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow