ರಾಜ್ಯದಲ್ಲಿ ಬಾಲ ಬಿಚ್ಚಿದ ಪಾಕ್ ಪ್ರೇಮಿಗಳು: ‘ಹಿಂದೂಸ್ಥಾನ್ ನಹಿ, ಮುಸ್ಲಿಂಸ್ಥಾನ ಬೋಲ್..’ ದೇಶ ವಿರೋಧಿ ಬರಹ

ಮೇ 10, 2025 - 22:07
 0  20
ರಾಜ್ಯದಲ್ಲಿ ಬಾಲ ಬಿಚ್ಚಿದ ಪಾಕ್ ಪ್ರೇಮಿಗಳು: ‘ಹಿಂದೂಸ್ಥಾನ್ ನಹಿ, ಮುಸ್ಲಿಂಸ್ಥಾನ ಬೋಲ್..’ ದೇಶ ವಿರೋಧಿ ಬರಹ

ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಪ್ರತಿಕಾರವಾಗಿ ಭಾರತೀಯ ಸೇನೆ ಆಪರೇಷನ್ಸಿಂದೂರ್ ಹೆಸರಿನಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಆದರೆ, ಉಡುಪಿಯ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ಗೋಡೆಯ ಮೇಲೆ 'ಹಿಂದೂಸ್ಥಾನ್ ನಹಿ, ಮುಸ್ಲಿಂಸ್ಥಾನ್ ಬೋಲ್' ಎಂಬ ದೇಶವಿರೋಧಿ ಬರಹ ಕಾಣಿಸಿಕೊಂಡಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ವಿದ್ಯಾರ್ಥಿನಿಯೊಬ್ಬಳೇ ಬರೆದಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಯನ್ನು ಪತ್ತೆ ಹಚ್ಚಲು ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಹೌದು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯ ಮಹಾಲಿಂಗ ಅಡ್ಯಂತ್ಯಾಯ ಮೆಮೋರಿಯಲ್ ಇಂಜಿನಿಯರಿಂಗ್ ಕಾಲೇಜಿನ ಸರೋಜಿನಿ ಹಾಸ್ಟೆಲ್‌ನ ಗೋಡೆಯ ಮೇಲೆ ದೇಶವಿರೋಧಿ ಬರಹಗಳು ಕಾಣಿಸಿಕೊಂಡಿವೆ. 'ಹಿಂದೂಸ್ಥಾನ್ ನಹಿ, ಮುಸ್ಲಿಂಸ್ಥಾನ್ ಬೋಲ್' 'ಮುಸ್ಲಿಂ ಜಿಂದಾಬಾದ್, ಹಿಂದೂ ಫಕ್ ಆಫ್" ಎಂಬ ಘೋಷಣೆಗಳನ್ನು ಗೋಡೆಯ ಮೇಲೆ ಬರೆಯಲಾಗಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಬರಹವನ್ನು ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಬರೆದಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಯನ್ನು ಗುರುತಿಸಲು ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಘಟನೆಯಿಂದ ಕಾಲೇಜು ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿದ್ದು, ಸಾಮಾಜಿಕ ಸೌಹಾರ್ದತೆಗೆ ಧಕ್ಕೆ ತರುವ ಈ ಕೃತ್ಯವನ್ನು ಸ್ಥಳೀಯರು ತೀವ್ರವಾಗಿ ಖಂಡಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow