ರಾಜ್ಯದಲ್ಲಿ ಮತ್ತೆ ಬೈಕ್ ಟ್ಯಾಕ್ಸಿ ಸೇವೆ ಆರಂಭ: ರಾಪಿಡೋ, ಉಬರ್​ʼನಿಂದ ಬುಕ್ಕಿಂಗ್ ಸ್ವೀಕಾರ!

ಆಗಸ್ಟ್ 21, 2025 - 15:03
 0  20
ರಾಜ್ಯದಲ್ಲಿ ಮತ್ತೆ ಬೈಕ್ ಟ್ಯಾಕ್ಸಿ ಸೇವೆ ಆರಂಭ: ರಾಪಿಡೋ, ಉಬರ್​ʼನಿಂದ ಬುಕ್ಕಿಂಗ್ ಸ್ವೀಕಾರ!

ಬೆಂಗಳೂರು: ರಾಜ್ಯದಲ್ಲಿ ಓಲಾ, ಉಬರ್‌, ರ‍್ಯಾಪಿಡೊ ಬೈಕ್‌ ಟ್ಯಾಕ್ಸಿ ಸೇವೆಗಳು ಇಂದಿನಿಂದ ಪುನರ್ ಆರಂಭವಾಗಲಿದೆ.  ಸುರಕ್ಷಿತೆಯ ಕಾರಣಕ್ಕೆ ಜೂನ್ 16 ರಿಂದ ರಾಜ್ಯ ಸರ್ಕಾರವು ಬೈಕ್ ಟ್ಯಾಕ್ಸಿಗಳ ಮೇಲೆ ನಿಷೇಧ ಹೇರಿತ್ತು. ಆ ಬಳಿಕ ಎಲ್ಲಾ ಬೈಕ್‌ ಟ್ಯಾಕ್ಸಿಗಳು ಸೇವೆ ಸ್ಥಗಿತಗೊಳಿಸಿದ್ದವು.

ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಖಾಸಗಿ ಸಾರಿಗೆ ಸಂಘಟನೆಗಳು ತೀವ್ರ ಪಟ್ಟು ಬೆನ್ನಲ್ಲೇ ಸುರಕ್ಷತೆಯ ದೃಷ್ಟಿಯಿಂದ ಜೂನ್ 16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ರದ್ದಾಗಿತ್ತು. ಆ ಸಂದರ್ಭದಲ್ಲಿ ಅನಧಿಕೃತವಾಗಿ ಸಂಚರಿಸಿದ ಬೈಕ್‌ ಟ್ಯಾಕ್ಸಿಗಳ ಮೇಲೆ ಆರ್‌ಟಿಓ ಅಧಿಕಾರಿಗಳು ಕ್ರಮಕೈಗೊಂಡಿದ್ದರು.

ಇದರ ಬೆನ್ನಲ್ಲೇ ಬೈಕ್ ಟ್ಯಾಕ್ಸಿ ಸೇವೆ ರದ್ದು ಪ್ರಶ್ನಿಸಿ ಆ್ಯಪ್ ಆಧಾರಿತ ಸೇವೆ ಒದಗಿಸುವ ಕಂಪನಿಗಳು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದವು. ಸದ್ಯ ಬೈಕ್ ಟ್ಯಾಕ್ಸಿ ಸಂಬಂಧ ನೀತಿ ಚೌಕಟ್ಟು ನಿಗದಿಪಡಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದು, ಸೆಪ್ಟೆಂಬರ್ 22ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಸದ್ಯ ರಾಜ್ಯ ಸರ್ಕಾರ ಇಂದಿನಿಂದ ಬೈಕ್ ಟ್ಯಾಕಿ ಸೇವೆಯನ್ನು ಆರಂಭಿಸಿದೆ.

ಬೆಂಗಳೂರು ವ್ಯಾಪ್ತಿಯಲ್ಲೇ 1.20 ಲಕ್ಷ ಬೈಕ್​ಗಳು ಬೈಕ್ ಟ್ಯಾಕ್ಸಿ ಸೇವೆಗೆ ನೋಂದಣಿ ಮಾಡಿಕೊಂಡಿವೆ. ಇನ್ನು ರಾಜ್ಯದಾದ್ಯಂತ 6 ಲಕ್ಷಕ್ಕೂ ಹೆಚ್ಚು ಸವಾರರು ಬೈಕ್ ಟ್ಯಾಕ್ಸಿ ನಂಬಿಕೊಂಡು ತಮ್ಮ ಜೀವನ ಸಾಗಿಸುತ್ತಿದ್ದಾರೆ.  ಬೈಕ್ ಟ್ಯಾಕಿ ಸೇವೆ ರದ್ದಾದ ವೇಳೆ ಸಾಕಷ್ಟು ಸಮಸ್ಯೆ ಉಂಟಾಗಿತ್ತು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow