ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ: ಕರ್ನಾಟಕದ ಈ ಜಿಲ್ಲೆಗಳಿಗೆ ಭರ್ಜರಿ ಮಳೆಯ ಮುನ್ಸೂಚನೆ!
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಮತ್ತೆ ಜೋರಾಗಿದೆ. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ವರುಣ ಅಕ್ಷರಶಃ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಮಳೆ ಹೊಡೆತಕ್ಕೆ ಜಲಾಶಯಗಳು, ಕೆರೆ ಕಟ್ಟಡಗಳು, ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿದೆ.
ಹೌದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಜುಲೈ 7 ರವರೆಗೆ ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ತಿಳಿಸಲಾಗಿದೆ.
ಕರ್ನಾಟಕದ ಕರಾವಳಿ, ಮಲೆನಾಡು, ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜುಲೈ 2 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು-ಮಿಂಚಿನೊಂದಿಗೆ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ರೈತರು ಮತ್ತು ಸಾಮಾನ್ಯ ಜನರಿಗೆ ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?