ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ..! ಸ್ವಾಮೀಜಿ ಅರೆಸ್ಟ್.!

ಮೇ 24, 2025 - 12:01
 0  12
ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ..! ಸ್ವಾಮೀಜಿ ಅರೆಸ್ಟ್.!

ಬೆಳಗಾವಿ: ಸ್ವಾಮೀಜಿಗಳು ಅಂದ್ರೆ ಜನರಿಗೆ ಎಲ್ಲಿಲ್ಲದ ಭಕ್ತಿ. ಸ್ವಾಮೀಜಿಗಳು ಅಂದ್ರೆ ಜನರು ಸಾಕ್ಷಾತ್ದೇವರಂತೆ ಭಾವಿಸ್ತಾರೆ. ಆದ್ರೆ ಇತ್ತೀಚೆಗಂತೂ ಖಾವಿ ಧರಿಸಿದ ಸ್ವಾಮೀಜಿಗಳು ಎಸಗ್ತಿರುವ ಅನಾಚಾರಕ್ಕೆ ಜನರಿಗೆ ಸ್ವಾಮೀಜಿಗಳ ಮೇಲಿನ ನಂಬಿಕೆಯೇ ಸತ್ತು ಹೋಗಿದೆಇದೀಗ ಸ್ವಾಮೀಜಿಯ ವಿರುದ್ಧವೇ ಗಂಭೀರ ಆರೋಪ ಕೇಳಿ ಬಂದಿದೆ

17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪ ಹಿನ್ನೆಲೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಮೇಖಳಿಯ ರಾಮಮಂದಿರ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನು ಪೋಕ್ಸೋ ಕೇಸ್ಅಡಿ ಪೊಲೀಸರು ಬಂಧಿಸಿದ್ದಾರೆ.

ಮೇ 13ರಂದು ಮನೆಗೆ ಬಿಡುವುದಾಗಿ ಬಾಲಕಿಯನ್ನು ಸ್ವಾಮೀಜಿ ರಾಯಚೂರಿಗೆ ಕರೆದೊಯ್ದಿದ್ದಾರೆ. ಮೇ 13, 14ರಂದು ರಾಯಚೂರಿನಲ್ಲಿ ಎರಡು ದಿನ ಇದ್ದರು. ಬಳಿಕ ಮೇ 15ರಂದು ರಾತ್ರಿ ಬಾಗಲಕೋಟೆಯಲ್ಲಿ  ವಾಸ್ತವ್ಯ ಹೂಡಿದ್ದರು. 2 ಕಡೆ ವಾಸ್ತವ್ಯ ಇದ್ದಾಗ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಯಾರ ಬಳಿಯಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ.

ಮೇ 16ರಂದು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಾಲಕಿಯನ್ನು ಸ್ವಾಮೀಜಿ ಬಿಟ್ಟು ಹೋಗಿದ್ದಾರೆ. ಬಗ್ಗೆ ಮೇ 17ರಂದು ಬಾಗಲಕೋಟೆ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬಳಿಕ ಮಹಿಳಾ ಠಾಣೆ ಪೊಲೀಸರು ಮೂಡಲಗಿ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow