ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ: ಡ್ರಾಪ್ ಕೊಡುವ ನೆಪದಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇಪ್!

ಅಕ್ಟೋಬರ್ 13, 2025 - 22:01
 0  12
ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ: ಡ್ರಾಪ್ ಕೊಡುವ ನೆಪದಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇಪ್!

ಚಿಕ್ಕಬಳ್ಳಾಪುರ: ಇತ್ತೀಚಿಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ರಾಜ್ಯವಲ್ಲದೇ ದೇಶದೆಲ್ಲೆಡೆ ತೀವ್ರ ಸಂಚಲನ ಮೂಡಿಸಿತ್ತು. ಇದೀಗ  ಚಿಕ್ಕಬಳ್ಳಾಪುರದಲ್ಲಿ ಕಾಮುಕ ಬೈಕ್ ಸವಾರನೋರ್ವ ಮಹಿಳೆಯೊಬ್ಬರಿಗೆ ಲಿಫ್ಟ್ ಕೊಡುವ ನೆಪದಲ್ಲಿ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ.

 ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿಗೆ ಹೋಗುವ ಮಾರ್ಗದಲ್ಲಿ ಡ್ರಾಪ್ ಕೊಡುವ ನೆಪದಲ್ಲಿ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಚಿಕ್ಕಬಳ್ಳಾಪುರ ಮೂಲದ ಸಿಕಂದರ್ ಬಾಬಾ ಹಾಗೂ ಜನಾರ್ಧನಾಚಾರಿ ಎಂದು ಗುರುತಿಸಲಾಗಿದ್ದು, ಸದ್ಯ ಸಂತ್ರಸ್ತ ಯುವತಿಗೆ ಮಹಿಳಾ ಸ್ವಾದಾರ ಕೇಂದ್ರದಲ್ಲಿ ಆರೈಕೆ ನೀಡಲಾಗುತ್ತಿದೆ.

ಘಟನೆ ನಡೆದ ದಿನ ಸಂತ್ರಸ್ತ ಯುವತಿ ಕೆಲಸ ಹುಡುಕಿಕೊಂಡು ಚಿಕ್ಕಬಳ್ಳಾಪುರ ನಗರಕ್ಕೆ ಆಗಮಿಸಿದ್ದರು. ಬಳಿಕ ವಾಪಸ್ ನಡೆದುಕೊಂಡು ಮಂಚೇನಹಳ್ಳಿಗೆ ಹೋಗುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ಆರೋಪಿ ಸಿಕಂದರ್ ಬಂದು, ಡ್ರಾಪ್ ಕೊಡುವ ನೆಪದಲ್ಲಿ ಯುವತಿಯನ್ನು ಪುಸಲಾಯಿಸಿ ಬೈಕ್ ಹತ್ತಿಸಿಕೊಂಡಿದ್ದ. ಬಳಿಕ ಅಲ್ಲಿಂದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಯುವತಿ ಮೇಲೆ ಅತ್ಯಾಚಾರ ಎಸಗಿದ್ದ. ಆನಂತರ ಚಿಕ್ಕಬಳ್ಳಾಪುರಕ್ಕೆ ಆಗಮಿಸಿ ತನ್ನ ಸ್ನೇಹಿತ ಜನಾರ್ಧನ್‌ ಅನ್ನು ಅದೇ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಇಬ್ಬರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದರು.

ಕೃತ್ಯದ ಬಳಿಕ ಆಕೆಯ ಕಿವಿಯಲ್ಲಿದ್ದ ಬಂಗಾರದ ಓಲೆ ಕಸಿದುಕೊಂಡು ಮಾರಾಟ ಮಾಡಿದ್ದಾರೆ. ಸಂತ್ರಸ್ತ ಯುವತಿಯನ್ನು ಸಮೀಪದಲ್ಲಿದ್ದ ಪೆಟ್ರೋಲ್ ಬಂಕ್ ಬಳಿ ಬಿಟ್ಟು ಹೋಗಿದ್ದಾರೆ. ಬಳಿಕ ಗಾಬರಿಯಿಂದ ಕೂತಿದ್ದ ಯುವತಿಯನ್ನು ಗಮನಿಸಿದ ಸ್ಥಳೀಯರು ಆಕೆಯನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಸದ್ಯ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ದೂರಿನನ್ವಯ ತನಿಖೆಗಿಳಿದ ಪೊಲೀಸರು ಸಿಸಿಟಿವಿ ದೃಶ್ಯ ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow