ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ ಹವಾಮಾನ ಇಲಾಖೆ

ಮೇ 26, 2025 - 12:02
 0  11
ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ ಹವಾಮಾನ ಇಲಾಖೆ

ಬೆಂಗಳೂರು: ಕರ್ನಾಟಕದಾದ್ಯಂತ ಮಳೆ ಚುರುಕುಗೊಳ್ಳಲಿದ್ದು, ಕರಾವಳಿ ಸೇರಿ 6 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ದೊರೆತಿದ್ದು, ರೆಡ್ ಅಲರ್ಟ್​ ಘೊಷಿಸಲಾಗಿದೆ.

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮಳೆಯಾಗುತ್ತಿದೆ. ಇದರಿಂದ ಮೇ 30ರವರೆಗೆ ಮಳೆ ಮುಂದುವರೆಯಲಿದೆ. ಮುಂದಿನ ನಾಲ್ಕು ದಿನಗಳ ವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಮಳೆ ಹೆಚ್ಚಳವಾಗುವ ಸಾಧ್ಯತೆ ಇದ್ದು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಐದು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ ವಿಜಯಪುರ ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಮಂಗಳೂರಿನ ಅಡ್ಯಾರ್ ಗ್ರಾಮದ ಜನರು ಪರದಾಡುತ್ತಿದ್ದಾರೆ. ಮಳೆಯಿಂದ ಚರಂಡಿಯಲ್ಲಿ ಹರಿಯುವ ನೀರು ಬಾವಿ ಸೇರುತ್ತಿದೆ. ಇದರಿಂದ ಗ್ರಾಮದ ಜನ ಉಪಯೋಗಿಸುವ ಬಾವಿಯ ನೀರೂ ಕಲುಷಿತವಾಗಿದೆ

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow