ರಾಜ್ಯದಲ್ಲಿ ಮೊಂತಾ ಚಂಡಮಾರುತ ಬೀತಿ: ನಾಳೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.! ಎಲ್ಲೆಲ್ಲಿ.?

ಅಕ್ಟೋಬರ್ 28, 2025 - 18:22
 0  23
ರಾಜ್ಯದಲ್ಲಿ ಮೊಂತಾ ಚಂಡಮಾರುತ ಬೀತಿ: ನಾಳೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.! ಎಲ್ಲೆಲ್ಲಿ.?

ಬೆಂಗಳೂರು: ಮೊಂತಾ ಚಂಡಮಾರುತದ ಪರಿಣಾಮವಾಗಿ ರಾಜ್ಯದ ಹಲವು ಭಾಗಗಳಲ್ಲಿ ನಾಳೆಯೂ ಮಳೆಯು ಮುಂದುವರಿಯಲಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ, 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚು ಇರಲಿದೆ. ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದ್ದರೂ, ಗಾಳಿಯ ವೇಗ ಹೆಚ್ಚಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣದ ನಡುವೆ ತುಸು ಮಳೆಯಾಗುವ ನಿರೀಕ್ಷೆ ಇದೆ.

ಯೆಲ್ಲೋ ಅಲರ್ಟ್ ಘೋಷಿತ ಜಿಲ್ಲೆಗಳು:
ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಬೆಳಗಾವಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಗದಗ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ. ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

ದಕ್ಷಿಣ ಒಳನಾಡು ಭಾಗ:
ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದೆ.

ಕರಾವಳಿ ಭಾಗ:
ಕರಾವಳಿಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆಯಾದರೂ, ಗಾಳಿಯ ವೇಗ ಗಂಟೆಗೆ 40–50 ಕಿ.ಮೀ. ಇರಲಿದ್ದು, ಕೆಲವಡೆ 60 ಕಿ.ಮೀ.ವರೆಗೆ ತಲುಪಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗಿದೆ.

ಬೆಂಗಳೂರು ವಾತಾವರಣ:
ನಗರದಲ್ಲಿ ನಾಳೆ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆ ಕಡಿಮೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಗಾಳಿಯ ವೇಗ ಗಂಟೆಗೆ 15–25 ಕಿ.ಮೀ. ಇರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow