ರಾಜ್ಯದಲ್ಲಿ ಸಿಎಂ ಬದಲಾವಣೆ ಖಚಿತವಾ? ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?
ಬೆಂಗಳೂರು:- ಕರ್ನಾಟಕದಲ್ಲಿ ಮತ್ತೆ ಪವರ್ ಶೇರಿಂಗ್ ವಿಚಾರ ಮುನ್ನೆಲೆಗೆ ಬಂದಿದೆ. ಇದೇ ವಿಚಾರವಾಗಿ ಇದೀಗ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿ 5 ವರ್ಷ ಇರ್ತಾರೆ. ಡಿಕೆ ಶಿವಕುಮಾರ್ ಅವರು ಸಿಎಂ ಆಗಬೇಕು ಅಂದುಕೊಂಡವರು. ಆದರೆ ಡಿಕೆ ಶಿವಕುಮಾರ್ ಅವರೇ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರುತ್ತಾರೆ ಎಂದು ಹೇಳಿದ್ದಾರೆ. ಡಿಕೆ ಶಿವಕುಮಾರ್ ಹೇಳಿದ ಮೇಲೆ ಸಿಎಂ ಬದಲಾವಣೆ ಅನ್ನೋ ವಿಷಯವೇ ಇಲ್ಲ ಎಂದರು.
ಸಿಎಂ ಅವರು ನಾನೇ ಇರುತ್ತೇನೆ ಅಂತ ಹೇಳಿದ್ದಾರೆ. ಡಿಕೆ ಶಿವಕುಮಾರ್ ಕೂಡಾ ಸಿದ್ದರಾಮಯ್ಯ ಇರುತ್ತಾರೆ ಅಂತ ಹೇಳಿದ್ದಾರೆ. ಹೀಗಾಗಿ ಸಿಎಂ ಬದಲಾವಣೆ ಅನ್ನೋ ಪ್ರಶ್ನೆಯೇ ಕೇಳೋ ಹಾಗೇ ಇಲ್ಲ. ನವೆಂಬರ್ ಕ್ರಾಂತಿ ಇಲ್ಲ. ಬರೀ ಬ್ರಾಂತಿ ಅಷ್ಟೇ. ನವೆಂಬರ್‌ಗೆ ಸಚಿವ ಸಂಪುಟ ಪುನರ್ ರಚನೆ ಆಗಬಹುದು. ಸಿಎಂ, ಡಿಸಿಎಂ ಮತ್ತು ಹೈಕಮಾಂಡ್ ನಿರ್ಧಾರ ಮಾಡಿ ಯಾವಾಗ ಬೇಕಾದರೂ ಸಂಪುಟ ಪುನರ್ ರಚನೆ ಮಾಡಬಹುದು ಎಂದು ಹೇಳಿದರು.
ನಿಮ್ಮ ಪ್ರತಿಕ್ರಿಯೆ ಏನು?