ರಾಜ್ಯದಲ್ಲಿ ಹೆಚ್ಚಿದ ಕೊರೋನಾ ಆತಂಕ: ಓರ್ವ ಬಲಿ, ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ ಸೋಂಕು ದೃಢ

ಬೆಂಗಳೂರು: ಸಿಂಗಾಪುರ, ಹಾಂಕಾಂಗ್ನಲ್ಲಿ ತಲ್ಲಣ ಎಬ್ಬಿಸಿರುವ ಕೊರೊನಾ ಹೊಸ ತಳಿ ಈಗ ಕರ್ನಾಟಕದಲ್ಲಿ ನಿಧಾನಕೆ ಏರುಗತಿಯಲ್ಲಿ ಸಾಗುತ್ತಿದೆ. ಮೇ ತಿಂಗಳಲ್ಲಿ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಜನವರಿಯಲ್ಲಿ ಮೂರು ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದವು. ಫೆಬ್ರವರಿಯಲ್ಲಿ ಕೇವಲ 1 ಕೇಸ್ ಪತ್ತೆಯಾಗಿತ್ತು. ಮಾರ್ಚ್ನಲ್ಲೂ ಮೂರು, ಏಪ್ರಿಲ್ ತಿಂಗಳಲ್ಲೂ ಕೇವಲ 3 ಕೇಸ್ಗಳು ದಾಖಲಾಗಿದ್ದವು. ಆದರೆ, ಮೇ ತಿಂಗಳು ಇನ್ನೂ ಮುಗಿದಿಲ್ಲ, ಆಗಲೇ 33 ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯಾದ್ಯಂತ 38 ಸಕ್ರಿಯ ಪ್ರಕರಣಗಳು ದೃಢಪಟ್ಟಿದ್ದು, ಅದರಲ್ಲಿ 32 ಬೆಂಗಳೂರಿನಲ್ಲಿವೆ. ವಿಜಯನಗರ, ಮೈಸೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿಯೂ ಕೊರೊನಾ ಸೋಂಕು ಕಾಲಿಟ್ಟಿದೆ. ಕೊರೊನಾದಿಂದ ಬೆಂಗಳೂರಿನಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಅದಲ್ಲದೆ ನಗರದ ಮಲ್ಲೇಶ್ವರಂನಲ್ಲಿ 45 ವರ್ಷದ ಮತ್ತು ರಾಜಾಜಿನಗರದಲ್ಲಿ 38 ವರ್ಷದ ವ್ಯಕ್ತಿಗೆ ಕೊವಿಡ್ ಪಾಸಿಟಿವ್ ಬಂದಿದೆ. ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದಿದ್ದರೂ ಕೊವಿಡ್ ಪಾಸಿಟಿವ್ ಬಂದಿದ್ದು, ಸದ್ಯ ಕೊವಿಡ್ ಸೋಂಕಿತರು ಹೋಮ್ ಐಸೋಲೇಷನ್ನಲ್ಲಿದ್ದಾರೆ.
ಪಕ್ಕದ ಕೇರಳ ಮತ್ತು ಆಂಧ್ರಪ್ರದೇಶದಲ್ಲಿ ಕೊವಿಡ್ ಪ್ರಕರಣ ಏರಿಕೆ ಹಿನ್ನಲೆ ರಾಜಧಾನಿ ಬೆಂಗಳೂರಿಗೂ ಟೆನ್ಷನ್ ಶುರುವಾಗಿದೆ. ಸದ್ಯ ರಾಜ್ಯದಲ್ಲಿ 35 ಕೊವಿಡ್ ಸಕ್ರಿಯ ಪ್ರಕರಣಗಳಿವೆ ಬೆಂಗಳೂರು ನಗರದಲ್ಲಿಯೇ 32 ಸಕ್ರಿಯ ಪ್ರಕರಣಗಳಿವೆ. ನಗರದಲ್ಲಿಯೇ ಕೊವಿಡ್ ಹೆಚ್ಚಳ ಹಿನ್ನಲೆ ಆತಂಕ ಹೆಚ್ಚಾಗಿದ್ದು, ಹೀಗಾಗಿ ಮುನ್ನೇಚ್ಚರಿಕೆಗೆ ಮುಂದಾಗಿರುವ ಆರೋಗ್ಯ ಇಲಾಖೆ, ಮಕ್ಕಳು, ಗರ್ಭಿಣಿಯರು ಮತ್ತು ವೃದ್ಧರಿಗೆ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ನಿಮ್ಮ ಪ್ರತಿಕ್ರಿಯೆ ಏನು?






