ರಾತ್ರೋರಾತ್ರಿ ಡಾ.ವಿಷ್ಣುವರ್ಧನ್ ಸ್ಮಾರಕ ನೆಲಸಮ..! ಅಷ್ಟಕ್ಕೂ ಆಗಿದ್ದೇನು..?

ನಟ ವಿಷ್ಣುವರ್ಧನ್ ಅವರ ಸ್ಮಾರಕ ವಿಚಾರದಲ್ಲಿ ಮೊದಲಿನಿಂದಲೂ ಅಭಿಮಾನಿಗಳಲ್ಲಿ ಅಸಮಾಧಾನ ಇತ್ತು. ಈಗ ಮತ್ತೊಂದು ನೋವುಂಟುಮಾಡುವ ಘಟನೆ ನಡೆದಿದೆ. ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ತೆರವುಗೊಳಿಸಿ ನೆಲಸಮ ಮಾಡಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ನಿರ್ದೇಶಕ ರವಿ ಶ್ರೀವತ್ಸ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ, ಭಾವುಕರಾಗಿ ಕಣ್ಣೀರು ಹಾಕಿದರು. ವರಮಹಾಲಕ್ಷ್ಮಿ ಹಬ್ಬದ ದಿನವೇ ಅವರು ಈ ದುಃಖದ ಸುದ್ದಿಯನ್ನು ಅಭಿಮಾನಿಗಳಿಗೆ ತಿಳಿಸಿದ್ದಾರೆ.
ಅಭಿಮಾನ್ ಸ್ಟುಡಿಯೋದಲ್ಲಿನ ಸಮಾಧಿ ಸ್ಥಳಕ್ಕೆ ಈಗ ಅಭಿಮಾನಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಮೈಸೂರಿನಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣವಾದರೂ, ಅಂತ್ಯಸಂಸ್ಕಾರ ನಡೆದ ಸ್ಥಳಕ್ಕೆ ಅಭಿಮಾನಿಗಳ ಭಾವನಾತ್ಮಕ ನಂಟು ಇತ್ತು.
ರವಿ ಶ್ರೀವತ್ಸ ಅವರು ಫೇಸ್ಬುಕ್ ಲೈವ್ ಮೂಲಕ, “ನಮ್ಮ ದೇವರ ಗುಡಿಯನ್ನು ಇಂದು ನೆಲಸಮ ಮಾಡಿದ್ದಾರೆ. ಇದು ನನ್ನ ಯಜಮಾನರು ಮಲಗಿದ್ದ ಜಾಗ. ಅಲ್ಲೊಂದು ಪುಟ್ಟ ಗುಡಿ, ಸಣ್ಣ ಗೋಪುರ ಇತ್ತು. ಅದನ್ನು ರಾತ್ರೋರಾತ್ರಿ ನೆಲಸಮ ಮಾಡಿದ್ದಾರೆ. ಅಭಿಮಾನಿಗಳು ನೋಡಲು ಬರಲು ಗೇಟ್ ತೆಗೆಯುತ್ತಿಲ್ಲ, ಪೊಲೀಸರು ಕಾವಲು ನಿಂತಿದ್ದಾರೆ” ಎಂದು ಅಳುತ್ತಾ ಹೇಳಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






