ರಾಹುಲ್ ಗಾಂಧಿ ವಿರುದ್ಧ ದಾಖಲಾಯ್ತು ಮೂರು FIR: ಕಾರಣ ಇಲ್ಲಿದೆ!?

ಸೆಪ್ಟೆಂಬರ್ 21, 2024 - 20:02
 0  8
ರಾಹುಲ್ ಗಾಂಧಿ ವಿರುದ್ಧ ದಾಖಲಾಯ್ತು ಮೂರು FIR: ಕಾರಣ ಇಲ್ಲಿದೆ!?

ರಾಯ್ಪುರ:- ರಾಹುಲ್‌ ಗಾಂಧಿ ವಿರುದ್ಧ 3 ಎಫ್‌ಐಆರ್‌ ದಾಖಲಾಗಿದೆ. ಸಿಖ್ಖರ ಕುರಿತು ನೀಡಿದ ಹೇಳಿಕೆ ಖಂಡಿಸಿ ಛತ್ತೀಸ್‌ಗಢದ ಬಿಜೆಪಿ ನಾಯಕರು ಮೂರು ಪ್ರತ್ಯೇಕ ಎಫ್‌ಐಆರ್ ದಾಖಲಿಸಿದ್ದಾರೆ.

ರಾಯ್ಪುರ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಒಂದು, ಬಿಲಾಸ್‌ಪುರ ಜಿಲ್ಲಾ ಸಿವಿಲ್ ಲೈನ್ಸ್ ಠಾಣೆಯಲ್ಲಿ ಹಾಗೂ ದುರ್ಗ್ ಜಿಲ್ಲೆಯ ಕೋಟ್ಬಾಲಿ ಪೊಲೀಸ್ ಠಾಣೆಯಲ್ಲಿ ಒಂದು ಎಫ್‌ಐಆ‌ರ್ ದಾಖಲಿಸಲಾಗಿದೆ. ಬಿಜೆಪಿ ನಾಯಕರು ನೀಡಿದ ದೂರಿನ ಮೇರೆಗೆ ರಾಹುಲ್ ಗಾಂಧಿ ವಿರುದ್ಧ ಬಿಎನ್‌ಎಸ್‌ ಸೆಕ್ಷನ್ 299 ಮತ್ತು 302ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತೀಸ್‌ಗಢದ ಬಿಜೆಪಿ ವಕ್ತಾರ ಅಮರ್‌ಜೀತ್ ಸಿಂಗ್ ಛಾಬ್ರಾ, ರಾಹುಲ್ ಹೇಳಿಕೆಯೂ ಸಿಖ್ ಸಮುದಾಯದ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ರಾಯ್ಪುರದಲ್ಲಿ ದೂರು ದಾಖಲಿಸಿದ್ದಾರೆ. 

ರಾಹುಲ್ ಹೇಳಿಕೆಯು ಶಾಂತಿಪ್ರಿಯ ಸಿಖ್ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದೆ. ಇದು ಸಮಾಜದ ಇತರ ಧರ್ಮಗಳೊಂದಿಗೆ ತಾರತಮ್ಯ ಮತ್ತು ದ್ವೇಷವನ್ನು ಉಂಟು ಮಾಡುತ್ತದೆ ಎಂದು ಆರೋಪಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow