ರೀ ಓಪನ್ ಆಗುತ್ತಾ ಸೌಜನ್ಯ ನಿಗೂಢ ಸಾವಿನ ತನಿಖೆ.? ಆರೋಪಿ ಚಿನ್ನಯ್ಯ ವಿರುದ್ಧ SITಗೆ ದೂರು!
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂಬ ಪ್ರಕರಣದ ಸಂಬಂಧ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಕಚೇರಿಗೆ ಗುರುವಾರ ಸೌಜನ್ಯ ತಾಯಿ ಕುಸುಮಾವತಿ ದೂರು ಸಲ್ಲಿಸಿದ್ದಾರೆ. ದೂರು ಸ್ವೀಕರಿಸಿದ ಅಧಿಕಾರಿಗಳು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಹೇಳಿಕೆ ನೀಡಿದ್ದಾರೆ.
ಧರ್ಮಸ್ಥಳದಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಭಾರೀ ಸದ್ದು ಮಾಡಿತ್ತು. 2012ರಲ್ಲಿ ಸೌಜನ್ಯಳನ್ನು ಅತ್ಯಾಚಾರ ಮಾಡಿ, ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದಾದ ನಂತರ ಈ ಪ್ರಕರಣದಲ್ಲಿ ಭಾರೀ ಬೆಳವಣಿಗೆಗಳು ನಡೆದಿದ್ದು, ಇದೀಗ ಸೌಜನ್ಯ ತಾಯಿ ಮಾಸ್ಕ್ ಮ್ಯಾನ್ ಚಿನ್ನಯ್ಯನ ಒಂದು ಹೇಳಿಕೆ ಆಧಾರದ ಮೇಲೆ ಆತನನ್ನು ತೀವ್ರವಾಗಿ ವಿಚಾರಣೆ ನಡೆಸಬೇಕು ಎಂದು ಬೆಳ್ತಂಗಡಿ ಎಸ್ ಐ ಟಿ ಕಛೇರಿಗೆ ಆಗಮಿಸಿ ದೂರು ನೀಡಿದ್ದಾರೆ.
ಮಾಸ್ಕ್ ಮ್ಯಾನ್ ಚಿನ್ನಯ್ಯ ಯೂಟ್ಯೂಬ್ ಚಾನಲ್ಗೆ ನೀಡಿದ ಸಂದರ್ಶನದಲ್ಲಿ, “ಸೌಜನ್ಯ ಅವರ ಮೃತದೇಹವನ್ನು ಎತ್ತಿಕೊಂಡು ಹೋಗಿರುವುದನ್ನು ನಾನು ನೋಡಿದ್ದೇನೆ” ಎಂದು ಹೇಳಿಕೆ ನೀಡಿದ್ದ. ಈ ಹೇಳಿಕೆಯ ಆಧಾರದ ಮೇಲೆ ಕುಸುಮಾವತಿ ಅವರು ಎಸ್ಐಟಿ ಎಸ್ಪಿ ಸೈಮನ್ ಅವರಿಗೆ ದೂರು ಸಲ್ಲಿಸಿದ್ದಾರೆ. ಆ ಹೇಳಿಕೆ ಆಧಾರದ ಮೇಲೆ ಚಿನ್ನಯ್ಯನನ್ನು ತೀವ್ರವಾಗಿ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?