ರೇಣುಕಾಸ್ವಾಮಿ ಕೇಸ್‌: Darshan ಗ್ಯಾಂಗ್ʼನ ಮೂವರಿಗೆ ಜಾಮೀನು ಮಂಜೂರು

ಸೆಪ್ಟೆಂಬರ್ 23, 2024 - 18:02
 0  19
ರೇಣುಕಾಸ್ವಾಮಿ ಕೇಸ್‌: Darshan ಗ್ಯಾಂಗ್ʼನ ಮೂವರಿಗೆ ಜಾಮೀನು ಮಂಜೂರು

ರೇಣುಕಾ ಸ್ವಾಮಿ ಕೊಲೆ ಕೇಸ್​ನ ತನಿಖೆ ಅಂತ್ಯವಾಗಿದ್ದು, ಚಾರ್ಜ್​ಶೀಟ್​ ಕೂಡ ಸಲ್ಲಿಕೆ ಆಗಿದೆ. ಜಾಮೀನು ಪಡೆಯಲು ದರ್ಶನ್​ ಮತ್ತು ಪವಿತ್ರಾ ಗೌಡ ಇನ್ನಷ್ಟ ದಿನ ಕಾಯುವುದು ಅನಿವಾರ್ಯ ಆಗಿದೆ. ಇದರ ಬೆನ್ನಲ್ಲೇ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ   ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಆಗಿದೆ. ಕೇಶವಮೂರ್ತಿಗೆ ಹೈಕೋರ್ಟ್‌ನಿಂದ  ಕಾರ್ತಿಕ್‌, ನಿಖಿಲ್‌ ನಾಯಕ್‌ಗೆ 57ನೇ ಸಿಸಿಹೆಚ್ ಕೋರ್ಟ್ ನಿಂದ ಜಾಮೀನು ಸಿಕ್ಕಿದೆ.

ಈ ಪ್ರಕರಣದಲ್ಲಿ ಕಾರ್ತಿಕ್‌, ಕೇಶವ್‌ಮೂರ್ತಿ, ನಿಖಿಲ್‌ ನಾಯಕ್‌ ಕ್ರಮವಾಗಿ ಎ 15, ಎ16, ಎ17 ಆರೋಪಿಗಳಾಗಿದ್ದರು. ಈ ಮೂವರು ರೇಣುಕಾಸ್ವಾಮಿ ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಆದರೆ ತನಿಖೆ ವೇಳೆ ಆರೋಪಿಗಳು ನೇರವಾಗಿ  ಕೊಲೆಯಲ್ಲಿ ಭಾಗಿಯಾಗಿಲ್ಲ. ಸಾಕ್ಷಿನಾಶ ಮಾಡಲು ಮುಂದಾಗಿದ್ದ ವಿಚಾರ ಬೆಳಕಿಗೆ ಬಂದಿತ್ತು. ಹೀಗಾಗಿ ಪೊಲೀಸರು ಸಾಕ್ಷ್ಯನಾಶ ಆಡಿಯಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಕೊಲೆಯಲ್ಲಿ ನೇರವಾಗಿ ಭಾಗಿಯಾಗದ ಕಾರಣ ಮೂವರಿಗೆ ಇಂದು ಜಾಮೀನು ಸಿಕ್ಕಿದೆ. ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌ ಕೇಶವಮೂರ್ತಿಗೆ ಷರತ್ತು ಬದ್ಧ ಜಾಮೀನು ನೀಡಿದೆ. ನ್ಯಾ.ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠ, ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದೆ. ಸಿಸಿಹೆಚ್ 57 ಸೆಷನ್ಸ್ ಕೋರ್ಟ್‌ನ ನ್ಯಾ. ಜೈ ಶಂಕರ್ ಅವರು A15 ಕಾರ್ತಿಕ್, A17 ನಿಖಿಲ್‌ಗೆ ಜಾಮೀನು ಮಂಜೂರು ಮಾಡಿ ಆದೇಶಿದ್ದಾರೆ.

 ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow