ರೇಣುಕಾಸ್ವಾಮಿ ಕೇಸ್: ದರ್ಶನ್, ಪವಿತ್ರಾಗೌಡ ಸೇರಿ ಎಲ್ಲಾ ಆರೋಪಿಗಳು ಕೋರ್ಟ್ಗೆ ಹಾಜರು

ಬೆಂಗಳೂರು: ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ದರ್ಶನ್ ಹಾಗೂ ಗ್ಯಾಂಗ್ನ ಹೈಕೋರ್ಟ್ ಬಿಗ ರಿಲೀಫ್ ನೀಡಿತ್ತು. ಇದೀಗ ನಟ ದರ್ಶನ್ ಹಾಗೂ ಪವಿತ್ರಾ ಗೌಡ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಹಾಗೂ ಎ2 ಆರೋಪಿ ದರ್ಶನ್, ಬೆಂಗಳೂರಿನ ಸೆಷನ್ಸ್ ನ್ಯಾಯಾಲಯಕ್ಕೆ ಆಗಮಿಸಿದ್ದಾರೆ.
ಜಾಮೀನು ಸಿಕ್ಕಿದರೂ ಇಲ್ಲಿಯವರೆಗೆ ಪವಿತ್ರಾಗೌಡ-ದರ್ಶನ್ ಭೇಟಿಯಾಗಿಲ್ಲ. ಈ ಹಿಂದೆ ಕೋರ್ಟ್ ವಿಚಾರಣೆಯ ಸಮಯದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖಾಮುಖಿಯಾಗಿದ್ದೇ ಕೊನೆ. ಅದಾದ ಬಳಿಕ ದರ್ಶನ್ ಹಾಗೂ ಪವಿತ್ರಾ ದೂರವಾಗಿದ್ದರು.
ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ 7 ಮಂದಿಗೆ ಕರ್ನಾಟಕ ಹೈಕೋರ್ಟ್ ಡಿ. 13 ರಂದು ಜಾಮೀನು ಮಂಜೂರು ಮಾಡಿತ್ತು. ಆದೇಶದಲ್ಲಿ ಏಳು ಆರೋಪಿಗಳಿಗೆ, ಕೋರ್ಟ್ ಅನುಮತಿ ಇಲ್ಲದೇ ಬೆಂಗಳೂರು ಬಿಟ್ಟು ಹೋಗುವಂತಿಲ್ಲ ಎಂಬ ಷರತ್ತನ್ನು ವಿಧಿಸಿತ್ತು.
ನಿಮ್ಮ ಪ್ರತಿಕ್ರಿಯೆ ಏನು?






