ರೇಣುಕಾಸ್ವಾಮಿ ಕೇಸ್: ಸೀಜ್ ಮಾಡಿದ 40 ಲಕ್ಷ ವಾಪಸ್ ಕೊಡಿ: ಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್!

ಬೆಂಗಳೂರು: ರೇಣುಕಾ ಸ್ವಾಮಿ ಕೇಸ್ ಸಂಬಂಧ ದರ್ಶನ್ ಮತ್ತು ಪವಿತ್ರಾ ಗೌಡ ಬೆಂಗಳೂರು ಸೆಷನ್ಸ್ ಕೋರ್ಟ್‌ಗೆ ಹಾಜರಾಗಿದ್ದರು. ಈ ಕೇಸ್‌ನ ಇತರ ಆರೋಪಿಗಳು ಕೋರ್ಟ್‌ಗೆ ಬಂದಿದ್ದರು. ಇದರ ಮಧ್ಯೆ ಪವಿತ್ರಾ ಗೌಡ ಹಾಗೂ ದರ್ಶನ್ ಮುಖಾಮುಖಿ ಆಗಿದ್ದರು. ಇದರ ಬೆನ್ನಲ್ಲೇ ಇದೀಗ ಆರೋಪಿ ದರ್ಶನ್ ಗೆ ಮೈಸೂರಿಗೆ ಹೋಗಲು ಅನುಮತಿ ಸಿಕ್ಕಿದೆ. 57 ನೇ ಸಿಸಿಹೆಚ್ ಕೋರ್ಟ್ ನಿಂದ ಆದೇಶ ಹೊರಡಿಸಿದೆ.
ಅದಲ್ಲದೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ಸಂದರ್ಭದಲ್ಲಿ ಜಪ್ತಿ ಮಾಡಿರುವ ತಮ್ಮ ಹಣವನ್ನು ವಾಪಸ್ ನೀಡಲು ಸೂಚಿಸುವಂತೆ ದರ್ಶನ್ ಹಾಗೂ ಪ್ರದೋಷ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರಸ್ತುತ ತುರ್ತು ಹಣದ ಅವಶ್ಯಕತೆಯಿದ್ದು, ಜಪ್ತಿ ಮಾಡಲಾದ ಹಣವನ್ನ ವಾಪಸ್ ನೀಡುವಂತೆ ಕೋರಿ 57ನೇ ಸೆಷನ್ಸ್ ನ್ಯಾಯಾಲಯಕ್ಕೆ ತಮ್ಮ ವಕೀಲರ ಮೂಲಕ ದರ್ಶನ್ ಹಾಗೂ ಪ್ರದೋಷ್ ಅರ್ಜಿ ಸಲ್ಲಿಸಿದ್ದಾರೆ. ಹೌದು ಪ್ರಕರಣದಲ್ಲಿ ಸೀಜ್ ಆಗಿರುವ 40 ಲಕ್ಷಕ್ಕಾಗಿ 57ನೇ ಸಿಸಿಎಚ್ ಕೋರ್ಟ್‌ಗೆ ದರ್ಶನ್ ಮತ್ತು ಪ್ರದೋಷ್ ಕಡೆಯಿಂದ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿ ಬೆನ್ನಲ್ಲೇ ಆಕ್ಷೇಪಣೆ ಸಲ್ಲಿಸುವಂತೆ ಎಸ್‌ಪಿಪಿ ಅವರಿಗೆ ನ್ಯಾಯಾಲಯ ಸೂಚಿಸಿದೆ. ಮತ್ತೊಂದೆಡೆ ಪೊಲೀಸರು ಜಪ್ತಿ ಮಾಡಿರುವ ಹಣದ ಕುರಿತು ತನಿಖೆಯ ಅಗತ್ಯವಿದ್ದು, ತಮ್ಮ ವಶಕ್ಕೆ ನೀಡುವಂತೆ ಆದಾಯ ತೆರಿಗೆ ಇಲಾಖೆ ಅರ್ಜಿ ಸಲ್ಲಿಸಿದೆ. ಆದಾಯ ತೆರಿಗೆ ಇಲಾಖೆಯ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ದರ್ಶನ್ ಪರ ವಕೀಲರಿಗೆ ನ್ಯಾಯಾಲಯ ಸೂಚಿಸಿದೆ.
ಅರ್ಜಿ ಬೆನ್ನಲ್ಲೇ ಆಕ್ಷೇಪಣೆ ಸಲ್ಲಿಸಲು ಎಸ್ಪಿಪಿ ಗೆ ಕೋರ್ಟ್ ಸೂಚನೆ ನೀಡಲಾಗಿದೆ. ಮತ್ತೊಂದೆಡೆ ಸೀಜ್ ಹಣ ತನಿಖೆ ಅಗತ್ಯವಿದ್ದು, ತಮ್ಮ ವಶಕ್ಕೆ ನೀಡವಂತೆ ಐಟಿ ಇಲಾಖೆ ಅರ್ಜಿ ಸಲ್ಲಿಸಿದ್ದಾರೆ. ಐಟಿ ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ದರ್ಶನ್ ಪರ ವಕೀಲರಿಗೆ ಸೂಚನೆ ನೀಡಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






