ರೇಣುಕಾಸ್ವಾಮಿ ಕೊಲೆ ನಡೆದ ಸ್ಥಳದಲ್ಲಿ ನಟ ದರ್ಶನ್.! ಫೋಟೋ ರಿಟ್ರೀವ್ – ದಾಸನಿಗೆ ಹೆಚ್ಚಿದ ಆತಂಕ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧೀಸಿದಂತೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ನಡೆಯಿತು. ಆದರೆ ಹೆಚ್ಚಿನ ವಾದ-ಪ್ರತಿವಾದಗಳು ಇಲ್ಲದೆಯೇ ಜಾಮೀನು ಅರ್ಜಿಯನ್ನು ನವೆಂಬರ್ 26 ಕ್ಕೆ ಮುಂದೂಡಲಾಯ್ತು. ಇದರ ಬೆನ್ನಲ್ಲೇ ಪಟ್ಟಣಗೆರೆ ಶೆಡ್ನಲ್ಲಿ ರೇಣುಕಾ ಸ್ವಾಮಿ ನಿಧನ ಹೊಂದಿದಾಗ ದರ್ಶನ್ ತೂಗುದೀಪ ಆ ಸ್ಥಳದಲ್ಲಿ ಇರಲಿಲ್ಲ ಎಂಬ ವಾದ ಈ ಹಿಂದೆ ಕೇಳಿ ಬಂದಿತ್ತು.
ದರ್ಶನ್ ತೂಗುದೀಪ, ರೇಣುಕಾ ಸ್ವಾಮಿಗೆ ಕೋಪದಲ್ಲಿ ಹೊಡೆದು ಅಲ್ಲಿಂದ ಹೊರಟು ಹೋದರು ಎನ್ನಲಾಗಿತ್ತು. ಆದರೆ ಈಗ ಪೊಲೀಸರಿಗೆ ಲಭ್ಯವಾಗಿರುವ ಫೋಟೊಗಳು ಹೇಳುತ್ತಿರುವುದೇ ಬೇರೆ. ರೇಣುಕಾ ಸ್ವಾಮಿ ಶವದ ಮುಂದೆ ದರ್ಶನ್ ತೂಗುದೀಪ ಹಾಗೂ ಇತರೆ ಆರೋಪಿಗಳು ನಿಂತಿರುವ ಫೋಟೊಗಳು ಇದಾಗಿದ್ದು, ಪ್ರಕರಣದ ಆರೋಪಿಯೊಬ್ಬರ ಮೊಬೈಲ್ನಿಂದ ಈ ಫೋಟೊಗಳನ್ನು ರಿಟ್ರೀವ್ ಮಾಡಲಾಗಿದೆ.
ಈಗ ಲಭ್ಯವಾಗಿರುವ ಚಿತ್ರದಲ್ಲಿ ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್, ನೀಲಿ ಬಣ್ಣದ ಟೀ ಶರ್ಟ್ ಧರಿಸಿ ದರ್ಶನ್ ತೂಗುದೀಪ ನಿಂತಿರುವ ಚಿತ್ರವಿದೆ. ಚಿತ್ರದಲ್ಲಿ ಪ್ರಕರಣ ಇತರೆ ಕೆಲವು ಆರೋಪಿಗಳು ಸಹ ಇದ್ದಾರೆ. ಚಿತ್ರದಲ್ಲಿ ರೇಣುಕಾ ಸ್ವಾಮಿಯ ಶವವೂ ಇದೆ. ಈ ಚಿತ್ರವನ್ನು ಪವನ್ ತೆಗೆದಿದ್ದಾರೆ. ಪವನ್ ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದ ಪೊಲೀಸರು ಅದನ್ನು ಎಫ್ಎಸ್ಎಲ್ಗೆ ರವಾನಿಸಿದ್ದಾರೆ. ಇನ್ನೂ ದರ್ಶನ್ಗೆ ಮಧ್ಯಂತರ ಜಾಮೀನು ಮಾತ್ರವೇ ದೊರೆತಿದ್ದು, ನಿಯಮಿತ ಜಾಮೀನು ಕೊಡಿಸುವ ಪ್ರಯತ್ನವನ್ನು ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಮಾಡುತ್ತಿದ್ದಾರೆ. ನವೆಂಬರ್ 26ಕ್ಕೆ ಅರ್ಜಿ ವಿಚಾರಣೆ ನಡೆಯಲಿದ್ದು, ಅಂದು ವಾದ ಏನಿರಲಿದೆ ಕಾದು ನೋಡಬೇಕಿದೆ.
ನಿಮ್ಮ ಪ್ರತಿಕ್ರಿಯೆ ಏನು?






