ರೇಣುಕಾಸ್ವಾಮಿ ಕೊಲೆ ಪ್ರಕರಣ: ಎ1 ಆರೋಪಿ ಪವಿತ್ರ ಗೌಡ ಬಂಧನ

ಆಗಸ್ಟ್ 14, 2025 - 14:16
 0  11
ರೇಣುಕಾಸ್ವಾಮಿ ಕೊಲೆ ಪ್ರಕರಣ: ಎ1 ಆರೋಪಿ ಪವಿತ್ರ ಗೌಡ ಬಂಧನ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ -1 ಆರೋಪಿ ಪವಿತ್ರಾ ಗೌಡ ಅವರನ್ನು ಮತ್ತೆ ಬಂಧಿಸಲಾಗಿದೆ. ಕೊಲೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಹಿನ್ನೆಲೆಯಲ್ಲಿ, ಬೆಂಗಳೂರಿನ ಆರ್ಆರ್ನಗರದಲ್ಲಿರುವ ಅವರ ನಿವಾಸಕ್ಕೆ ತೆರಳಿದ ಪೊಲೀಸರು ಬಂಧನ ಕಾರ್ಯಾಚರಣೆ ನಡೆಸಿದರು.

ತೀರ್ಪು ಹೊರಬರುವ ಮುನ್ನ ಪವಿತ್ರಾ ಗೌಡ ದೇವರ ಮೊರೆ ಹೋಗಿ, ಮನೆಯಲ್ಲಿ ತುಳಸಿ ಗಿಡಕ್ಕೆ ಪೂಜೆ ಸಲ್ಲಿಸಿದ್ದರು. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದರು. ಸುಪ್ರೀಂ ಕೋರ್ಟ್ ತೀರ್ಪು ಪ್ರಕಟವಾದ ತಕ್ಷಣ, ಮನೆಯಲ್ಲಿ ತಾಯಿ ಎದುರು ಬಿಕ್ಕಿ ಬಿಕ್ಕಿ ಅತ್ತಿದ್ದರಂತೆ. ಇನ್ನೂ ಪವಿತ್ರಾ ಗೌಡ ಮನೆಯ ಬಾಗಿಲು ತೆರೆದೊಡನೆ ಪೊಲೀಸರು ಬಂಧಿಸಿದ್ದಾರೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow