ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಹಾಗೂ ಬಳ್ಳಾರಿ ಜೈಲಿನಲ್ಲಿ ದರ್ಶನ್ ಈಗಾಗಲೇ ಶತದಿನೋತ್ಸವ ಆಚರಿಸಿದ್ದಾರೆ. ಜೈಲುವಾಸ ಸಹಿಸಲಾಗದೆ ಒದ್ದಾಡುತ್ತಿದ್ದ ದಾಸ ಕೊನೆಗೂ ಕೊಂಚ ಸಮಾಧಾನಪಡುವಂತಾಗಿದೆ. ಹಿರಿಯ ವಕೀಲ ಸಿ.ವಿ. ನಾಗೇಶ್ ದರ್ಶನ್ ಪರ ಪ್ರಬಲ ವಾದ ಮಂಡಿಸಿದ್ದು ಪೊಲೀಸರು ಸರಿಯಾಗಿ ತನಿಖೆ ಮಾಡಿಲ್ಲ ಎಂದು ವಾದಿಸಿದ್ದಾರೆ.
ಇನ್ನೂ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ ಮತ್ತೆ ನಿರಾಸೆಯಾಗಿದೆ. ಅರ್ಜಿ ವಿಚಾರಣೆಯನ್ನು ಅ.8 ಕ್ಕೆ ಮುಂದೂಡಲಾಗಿದೆ. ಇಂದು ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ಅವರು ಸುದೀರ್ಘ ವಾದ ಮಂಡಿಸಿದರು. ಪ್ರತಿವಾದಕ್ಕೆ ಎಸ್‌ಪಿಪಿ ಅವಕಾಶ ಕೇಳಿದರು. ಹೀಗಾಗಿ ವಿಚಾರಣೆಯನ್ನು ಮಂಗಳವಾರಕ್ಕೆ ಕೋರ್ಟ್ ಮುಂದೂಡಿಕೆ ಮಾಡಿದೆ. ಆರೋಪಿಗಳಾದ ಪವಿತ್ರಾಗೌಡ ಮತ್ತು ರವಿಶಂಕರ್ ಜಾಮೀನು ಅರ್ಜಿ ವಿಚಾರಣೆಯನ್ನೂ ಮಂಗಳವಾರಕ್ಕೆ ಮುಂದೂಡಲಾಗಿದೆ. ಅಂದು ಮಧ್ಯಾಹ್ನ 12:30 ಕ್ಕೆ ವಿಚಾರಣೆ ನಡೆಯಲಿದೆ.
ನಿಮ್ಮ ಪ್ರತಿಕ್ರಿಯೆ ಏನು?






