ರೋಬೋಟ್ ನೆರವಿನಿಂದ ಸಾರಿಗೆ ಸಚಿವರ ಮೊಣಕಾಲಿಗೆ ನಡೆದ ಶಸ್ತ್ರಚಿಕಿತ್ಸೆ ಯಶಸ್ವಿ! 

ಫೆಬ್ರವರಿ 6, 2025 - 21:21
 0  15
ರೋಬೋಟ್ ನೆರವಿನಿಂದ ಸಾರಿಗೆ ಸಚಿವರ ಮೊಣಕಾಲಿಗೆ ನಡೆದ ಶಸ್ತ್ರಚಿಕಿತ್ಸೆ ಯಶಸ್ವಿ! 

ಬೆಂಗಳೂರು:- ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ರೋಬೋಟ್‌ ನೆರವಿನ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ನಡೆದಿದ್ದು, ಇದೀಗ ಯಶಸ್ವಿಯಾಗಿದೆ. 

ಶಸ್ತ್ರಚಿಕಿತ್ಸೆ ಯಶಸ್ವಿ ಬಳಿಕ ತಮ್ಮ ಚೇತರಿಕೆ ಅನುಭವವನ್ನು ಸಚಿವ ರಾಮಲಿಂಗಾರೆಡ್ಡಿ ಮಾಧ್ಯಮಗಳ ಜೊತೆ ಹಂಚಿಕೊಂಡಿದ್ದಾರೆ. 

ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಮೊಣಕಾಲು ಕೀಲು ಬದಲಾವಣೆ ಶಸ್ತ್ರಚಿಕಿತ್ಸೆ ಒಳಪಟ್ಟು ಈಗ ಚೇತರಿಸಿಕೊಂಡಿಕೊಂಡಿದ್ದಾರೆ. ಇನ್ನು ಸಚಿವರು ತಮ್ಮ ಶೀಘ್ರಚೇತರಿಕೆಯ ಅನುಭವ ಹಂಚಿಕೊಂಡಿದ್ದಾರೆ. ರೋಬೋಟ್‌ ನೆರವಿನಿಂದ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದು, ನನ್ನ ಶೀಘ್ರಚೇತರಿಕೆಗೆ ಹೆಚ್ಚು ಸಹಕಾರಿಯಾಯಿತು ಎಂದಿದ್ದಾರೆ.

ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಮೊಣಕಾಲು ಕೀಲು ಬದಲಾವಣೆ ಶಸ್ತ್ರಚಿಕಿತ್ಸೆ ಒಳಪಟ್ಟು, ಚೇತರಿಸಿಕೊಂಡವರ ಬೆಂಬಲಕ್ಕಾಗಿ ಆಯೋಜಿಸಿದ್ದ “ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೆಲವು ಸಮಯದಿಂದ ಮೊಣಕಾಲಿನ ನೋವು ಕಾಡಲಾರಂಭಿಸಿತು, ಮೆಟ್ಟಿಲುಸಹ ಹತ್ತಲು ಸಾಧ್ಯವಾಗುತ್ತಿರಲಿಲ್ಲ, ಹಲವಾರು ಜನ ಹಲವು ರೀತಿಯ ಸಲಹೆ ನೀಡಿದರು. ಮಂಡಿನೋವಿಗೆ ತೈಲವನ್ನೂ ಸಹ ಹಚ್ಚಿಬಿಟ್ಟೆ, ಆದರೂ ಯಾವುದೇ ಪ್ರಯೋಜನ ಕಾಣಲಿಲ್ಲ. ನಂತರ ಸ್ನೇಹಿತರ ಸಲಹೆಯಂತೆ ಫೋರ್ಟಿಸ್‌ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಡಾ.ನಾರಾಯಣ್ ಹುಲ್ಸೆ ಅವರನ್ನು ಭೇಟಿ ಮಾಡಿ, ತಪಾಸಣೆಗೆ ಒಳಗಾದಾಗ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಯ ಸಲಹೆ ನೀಡಿದರು ಎಂದು ಹೇಳಿದರು.

ಪ್ರಾರಂಭದಲ್ಲಿ ಶಸ್ತ್ರಚಿಕಿತ್ಸೆ ಬಗ್ಗೆ ಹಿಂಜರಿಕೆ ಇತ್ತು. ಆದರೆ, ರೋಬೋಟ್‌ ನೆರವಿನಿಂದ ನಿಖರವಾಗಿ ಹಾಗೂ ಅತಿವೇಗವಾಗಿ ಚೇತರಿಕೆ ಕಾಣಬಹುದು ಎಂಬುದರ ಬಗ್ಗೆ ವೈದ್ಯರ ಭರವಸೆ ನೀಡಿದ ಬಳಿಕ ತೆರೆದ ಶಸ್ತ್ರಚಿಕಿತ್ಸೆ ಬದಲು ರೋಬೋಟ್‌ ನೆರವಿನ ಶಸ್ತ್ರಚಿಕಿತ್ಸೆ ಆಯ್ದುಕೊಂಡೆ. ಅಂತೆಯೇ ಶಸ್ತ್ರಚಿಕಿತ್ಸೆ ಬಳಿಕ ನನ್ನ ನಿರೀಕ್ಷೆಗೂ ಮೀರಿ ಶೀಘ್ರವಾಗಿ ಚೇತರಿಕೆ ಕಂಡಿದ್ದೇನೆ. ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಗಾಗುವವರು ರೋಬೋಟ್‌ ನೆರವನ್ನು ಆಯ್ಕೆ ಮಾಡಿಕೊಳ್ಳುವುದು ಉತ್ತಮ ಎಂಬುದು ನನ್ನ ಅನಿಸಿಕೆ ಎಂದು ತಿಳಿಸಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow