ರೋಷನ್ ಜೊತೆಗೆ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರೂಪಕಿ ಅನುಶ್ರೀ!
ನಟಿ ಅನುಶ್ರೀ ವಿವಾಹ ರೋಷನ್ ಜೊತೆ ನೆರವೇರಿದೆ. ಬೆಂಗಳೂರಿನ ಹೊರ ವಲಯದಲ್ಲಿ ಈ ವಿವಾಹ ನೆರವೇರಿದೆ. ಮದುವೆ ಬಗ್ಗೆ ಹೆಚ್ಚಾಗಿ ಎಲ್ಲಿಯೂ ಮಾತನಾಡದ ಅನುಶ್ರೀ ಈಗ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಇಂದು ಬೆಳಗ್ಗೆ 10.56ಕ್ಕೆ ರೋಷನ್ ಅನುಶ್ರೀಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ. ಈ ಇಬ್ಬರ ಮದುವೆಯೂ ಬೆಂಗಳೂರಿನ ಹೊರವಲಯದ ಸಂಭ್ರಮ ಬೈ ಸ್ವಾನ್ಲೈನ್ಸ್ ಸ್ಟುಡಿಯೋಸ್ ತಿಟ್ಟಹಳ್ಳಿ, ಕಗ್ಗಲಿಪುರದಲ್ಲಿ ನಡೆಯುತ್ತಿದೆ. ಕೊಡಗು ಮೂಲದ ರಾಮಮೂರ್ತಿ ಹಾಗೂ ಸಿಸಿಲಿಯಾ ಅವರ ಪುತ್ರ ರೋಷನ್ ಜೊತೆ ಅನುಶ್ರೀ ವಿವಾಹ ಆಗಿದ್ದಾರೆ.
ಇನ್ನೂ, ನಿರೂಪಕಿ ಅನುಶ್ರೀ ಹಾಗೂ ರೋಷನ್ ಅದ್ಧೂರಿ ಮದುವೆಗೆ ರಾಜ್ ಬಿ ಶೆಟ್ಟಿ, ನೆನಪಿರಲಿ ಪ್ರೇಮ್, ಕಾವ್ಯ ಶಾ, ಸೋನಲ್ ಮೊಂಥೆರೋ, ನಟ ನಾಗಭೂಷಣ್, ಚೈತ್ರಾ ಜೆ ಆಚಾರ್, ನಟ ಶರಣ್ ಸೇರಿದಂತೆ ಸಾಕಷ್ಟು ಸ್ಟಾರ್ ಸೆಲೆಬ್ರಿಟಿಗಳು ಬಂದು ನವಜೋಡಿಗೆ ಶುಭ ಹಾರೈಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?