ರೋಹಿತ್–ಕೊಹ್ಲಿ ಜೋಡಿ ಮತ್ತೆ ಕಣಕ್ಕಿಳಿಯುವುದು ಯಾವಾಗ? ಇಲ್ಲಿದೆ ನೋಡಿ ಉತ್ತರ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ಮುಕ್ತಾಯವಾಗಿದೆ. ಮೂರು ಪಂದ್ಯಗಳ ಈ ಸರಣಿಯಲ್ಲಿ ಆಸ್ಟ್ರೇಲಿಯಾ ಮೊದಲೆರಡು ಪಂದ್ಯಗಳನ್ನು ಗೆದ್ದರೆ, ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿತು. ಈಗ ಎರಡೂ ತಂಡಗಳು ಟಿ20 ಸರಣಿಗೆ ಸಜ್ಜಾಗುತ್ತಿವೆ.
ಆದರೆ ಈ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ದಿಗ್ಗಜರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವುದಿಲ್ಲ. ಇತ್ತೀಚೆಗೆ ಇಬ್ಬರೂ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು. ಹೀಗಾಗಿ “ರೋ-ಕೊ ಜೋಡಿ” ಮತ್ತೆ ಕಣಕ್ಕಿಳಿಯುವುದು ಯಾವಾಗ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.
ಈ ಪ್ರಶ್ನೆಗೆ ಉತ್ತರ – ನವೆಂಬರ್ ಅಂತ್ಯದಲ್ಲಿ!
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಏಕದಿನ ಸರಣಿ ನವೆಂಬರ್‌ನಲ್ಲಿ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯ ನವೆಂಬರ್ 30 ರಂದು ಜರುಗಲಿದ್ದು, ಅದರಿಂದಲೇ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮತ್ತೆ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲಿದ್ದಾರೆ.
ಸರಣಿಯ ವೇಳಾಪಟ್ಟಿ:
ಮೊದಲ ಏಕದಿನ: ನವೆಂಬರ್ 30
ಎರಡನೇ ಏಕದಿನ: ಡಿಸೆಂಬರ್ 3
ಮೂರನೇ ಏಕದಿನ: ಡಿಸೆಂಬರ್ 6
ಈ ಸರಣಿಯ ಬಳಿಕ ಟೀಮ್ ಇಂಡಿಯಾ ಜನವರಿಯಲ್ಲಿ ನ್ಯೂಝಿಲೆಂಡ್ ವಿರುದ್ಧ ಸರಣಿ ಆಡಲಿದೆ.
ಅಂದರೆ, ಅಭಿಮಾನಿಗಳು ರೋಹಿತ್–ಕೊಹ್ಲಿ ಜೋಡಿಯ ಆರ್ಭಟವನ್ನು ಮತ್ತೊಮ್ಮೆ ಕಣ್ತುಂಬಿಕೊಳ್ಳಲು ಇನ್ನೂ ಕೆಲವು ದಿನ ಕಾಯಬೇಕಾಗಿದೆ. ಬಲಿಷ್ಠ ಸೌತ್ ಆಫ್ರಿಕಾ ವಿರುದ್ಧ ನಡೆಯಲಿರುವ ಈ ಸರಣಿಯಲ್ಲಿ ಇಬ್ಬರೂ ದಿಗ್ಗಜರಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?