ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಭೈರತಿ ಬಸವರಾಜ್ʼಗೆ ಬಿಗ್ ರಿಲೀಫ್

ಆಗಸ್ಟ್ 13, 2025 - 16:02
 0  20
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಭೈರತಿ ಬಸವರಾಜ್ʼಗೆ ಬಿಗ್ ರಿಲೀಫ್

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರಿಗೆ ಹೈಕೋರ್ಟ್‌ನಿಂದ ಮಧ್ಯಂತರ ರಿಲೀಫ್ ಸಿಕ್ಕಿದೆ. ನ್ಯಾಯಮೂರ್ತಿ ಎಂ.ಐ. ಅರುಣ್ ಅವರ ಪೀಠದಿಂದ ಬಂದ ಆದೇಶವು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ, ಶಾಸಕ ಭೈರತಿ ಬಸವರಾಜ್ ವಿರುದ್ಧ ತಕ್ಷಣ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಸೂಚಿಸಿದೆ. ಜೊತೆಗೆ, ಅವರು ತನಿಖೆಗೆ ಸಹಕರಿಸಬೇಕು ಎಂದು ಆದೇಶ ನೀಡಿದೆ ಭೈರತಿ ಬಸವರಾಜ್, ಪ್ರಕರಣವನ್ನು ರದ್ದುಪಡಿಸಲು ಅರ್ಜಿ ಸಲ್ಲಿಸಿದ್ದರು.

ಅವರ ಪರ ವಕೀಲರು, ಶಾಸಕರು ಈವರೆಗೆ ವಿಚಾರಣೆಗೆ ಸಂಪೂರ್ಣ ಸಹಕರಿಸಿದ್ದಾರೆ ಎಂದು ವಾದಿಸಿದರು. ಜುಲೈ 15ರಂದು ನಡೆದ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ, ಭೈರತಿ ಸುರೇಶ್ ಅವರಿಗೆ ಸಹಕಾರ ನೀಡಿದ ಆರೋಪ ಬಸವರಾಜ್ ಅವರ ಮೇಲೆ ಕೇಳಿಬಂದಿತ್ತು. ಈ ಪ್ರಕರಣದಲ್ಲಿ, ಜಗದೀಶ್, ವಿಮಲ್, ಕಿರಣ್, ಅನಿಲ್ ಸೇರಿದಂತೆ ಶಾಸಕರ ವಿರುದ್ಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow