ಲಕ್ಷ್ಮಿ ನಿವಾಸ ನಟಿ ದಿಶಾ ಮದನ್‌ಗೆ ಕಾನ್ ಫಿಲ್ಮ್ ಫೆಸ್ಟಿವಲ್ ಆಹ್ವಾನ!

ಮೇ 14, 2025 - 19:58
 0  11
ಲಕ್ಷ್ಮಿ ನಿವಾಸ ನಟಿ ದಿಶಾ ಮದನ್‌ಗೆ ಕಾನ್ ಫಿಲ್ಮ್ ಫೆಸ್ಟಿವಲ್ ಆಹ್ವಾನ!

ಕನ್ನಡ ಕಿರುತೆರೆ ನಟಿ ದಿಶಾ ಮದನ್‌ಗೆ ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಕಾನ್ ಫಿಲ್ಮ್ ಫೆಸ್ಟಿವಲ್‌ಗೆ ಆಹ್ವಾನ ದೊರೆತಿದೆ. ಈ ಖುಷಿಯನ್ನು ಸೋಷಿಯಲ್ ಮೀಡಿಯಾದಲ್ಲಿ ನಟಿ ಹಂಚಿಕೊಂಡಿದ್ದಾರೆ.

ಕಾನ್ ಫಿಲ್ಮ್ ಫೆಸ್ಟಿವಲ್ ಫ್ರಾನ್ಸ್‌ನಲ್ಲಿ ಶುರುವಾಗಿದೆ. ಮೇ 13ರಿಂದ 24ರ ವರೆಗೆ ಇದು ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಭಾಗಿಯಾಗಲು ಫಿಲ್ಮ್ ಫೆಸ್ಟಿವಲ್ ಟೀಮ್ ಅಳೆದು ತೂಗಿ ಕೆಲವೇ ಕೆಲವು ತಾರೆಯರಿಗೆ ಮಾತ್ರ ಆಮಂತ್ರಣ ನೀಡುತ್ತಾರೆ. ಹೀಗಿರುವಾಗ ಕನ್ನಡತಿ ದಿಶಾಗೆ ಕಾನ್ ಫಿಲ್ಮ್ ಫೆಸ್ಟಿವಲ್‌ಗೆ ಬರಲು ಬಂಪರ್ ಅವಕಾಶ ಸಿಕ್ಕಿದೆ. ಆಹ್ವಾನ ಪತ್ರ ನೀಡಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಫ್ರಾನ್ಸ್‌ನಲ್ಲಿ ಕಾನ್ ಫಿಲ್ಮ್ ಫೆಸ್ಟಿವಲ್‌ಗೆ  ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಅತೀ ದೊಡ್ಡ ಚಲನಚಿತ್ರೋತ್ಸವಕ್ಕೆ ದೇಶ ವಿದೇಶದ ನಟ-ನಟಿಯರು ಭಾಗಿಯಾಗುತ್ತಾರೆ.

ಪ್ರಸ್ತುತ ನಟಿ ದಿಶಾ ‘ಲಕ್ಷ್ಮಿ ನಿವಾಸ’  ಸೀರಿಯಲ್‌ನಲ್ಲಿ ಭಾವನಾ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮನೋಜ್ಞ ನಟನೆಯಿಂದ ಮನೆ ಮಾತಾಗಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow