ಲಾಂಗ್, ಮಚ್ಚು ಹಿಡಿದು ಪೋಸ್: ವಿನಯ್ ಗೌಡ, ರಜತ್ ಕಿಶನ್ ವಿರುದ್ಧ FIR - ಬಂಧನ ಸಾಧ್ಯತೆ!

ಮಾರ್ಚ್ 24, 2025 - 10:26
 0  17
ಲಾಂಗ್, ಮಚ್ಚು ಹಿಡಿದು ಪೋಸ್: ವಿನಯ್ ಗೌಡ, ರಜತ್ ಕಿಶನ್ ವಿರುದ್ಧ FIR - ಬಂಧನ ಸಾಧ್ಯತೆ!

ಬಿಗ್ ಬಾಸ್ ಸ್ಪರ್ಧಿ ವಿನಯ್ ಗೌಡ ಹಾಗೂ ರಜತ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಇತ್ತೀಚೆಗೆ ಲಾಂಗ್ ಹಿಡಿದು ರೀಲ್ಸ್ ಮಾಡಿದ ಸಂಬಂಧ ಶಸ್ತ್ರಾಸ್ತ್ರ ಕಾಯ್ದೆ ಅಡಿ‌ ಬಸವೇಶ್ವರ ನಗರ ಠಾಣೆಯಲ್ಲಿ ಪ್ರಕರಣ ಹಾಕಲಾಗಿದೆ.  ರಜತ್ ಕಿಶನ್ ಜೊತೆ ನಟ ವಿನಯ್ ಗೌಡ ಒಂದು ಮಸ್ತ್ ರೀಲ್ಸ್ ಮಾಡಿದ್ದಾರೆ.

ಈ ರೀಲ್ಸ್‌ನಲ್ಲಿ ವಿನಯ್ ಗೌಡ ಲಾಂಗು ಹಿಡಿದು, ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ದರ್ಶನ್ ಅವರ ‘ಕರಿಯ’ ಸಿನಿಮಾದ ಸ್ಟೈಲ್‌ನಲ್ಲಿ ಸ್ಲೋ ಮೋಷನ್‌ನಲ್ಲಿ ನಡೆಯುತ್ತಿರುತ್ತಾರೆ. ಈ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗ್ತಿದೆ. ಇದರ ಬೆನ್ನಲ್ಲೇ ಇಬ್ಬರ ಸ್ಪರ್ಧಿಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ. 

ಬಸವೇಶ್ವರ ನಗರದಲ್ಲಿ ಸಾರ್ವಜನಿಕವಾಗಿ ಲಾಂಗ್ ಹಿಡಿದು ಭಯದ ವಾತಾವರಣ ಸೃಷ್ಟಿಸುವ ರೀಲ್ಸ್ ಮಾಡಿದ್ದು ಈಗ ಸಮಸ್ಯೆಗೆ ಕಾರಣವಾಗಿದೆ. ಅಲ್ಲದೇ ಈ ರೀಲ್ಸ್‌ ಅನ್ನು ʻಬುಜ್ಜಿʼ ಅನ್ನೋ ಇನ್‌ಸ್ಟಾ ಖಾತೆಯಲ್ಲಿ ಶೇರ್‌ ಮಾಡಿದ್ದಾರೆ. 

ಈ ವಿಡಿಯೋ ಗಮನಿಸಿದ ಬಸವೇಶ್ವರ ನಗರ ಪೊಲೀಸರು, ಇಬ್ಬರ ವಿರುದ್ಧ ಆರ್ಮ್ಸ್ ಆಕ್ಟ್ ಆಡಿ ಕೇಸ್ ದಾಖಲಿಸಿದ್ದಾರೆ. ಸಾರ್ವಜನಿಕವಾಗಿ ಮಾರಕಾಸ್ತ್ರಗಳನ್ನು ಹಿಡಿದು ರಿಲ್ಸ್ ಮಾಡುವುದು, ಭಯದ ವಾತಾವರಣ ಸೃಷ್ಟಿಸೋದು ಕಾನೂನು ಪ್ರಕಾರ ಅಪರಾಧವಾಗಿದೆ. ಈ ನಿಟ್ಟಿನಲ್ಲಿ ಈ ಇಬ್ಬರ ಸ್ವರ್ಧಿಗಳ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow