ಲೇಡಿಸ್ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ರೆಕಾರ್ಡ್ ಮಾಡಿದ ಕಾಮುಕ.!

ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ರಾಜರಾಜೇಶ್ವರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇರಿಸಿ ವಿಡಿಯೋ ಚಿತ್ರೀಕರಣ ಮಾಡಿರುವ ಆರೋಪ ಕೇಳಿಬಂದಿದೆ. ಹೌದು ಬೆಂಗಳೂರಿನ ಕಗ್ಗಲಿಪುರದಲ್ಲಿ ಇರುವ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ಯುವಕನೋರ್ವ ಹುಡುಗಿಯರ ವಾಶ್ ರೂಮ್ನಲ್ಲಿ ಕ್ಯಾಮೆರಾ ಅಳವಡಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈಗಾಗಲೇ ಈ ಕ್ಯಾಮೆರಾ ಇಟ್ಟಿದ್ದ ಯುವಕನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದ್ದು, ಸ್ಥಳಕ್ಕೆ ಕಗ್ಗಲಿಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಲೇಡಿಸ್ ಟಾಯ್ಲೆಟ್ ನಲ್ಲಿ ಕ್ಯಾಮೆರಾ ಇಟ್ಟು ಅಡಗಿ ಕೂತಿದ್ದ ಯುವಕನನ್ನ ಕೂಡಿಹಾಕಿ ಯುವತಿಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಅದೇ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದ ವಿದ್ಯಾರ್ಥಿಯಾಗಿದ್ದು, ಕಾಲೇಜು ವಿದ್ಯಾರ್ಥಿಗಳು ಈ ಘಟನೆಯನ್ನು ನೋಡಿ ಆಕ್ರೋಶಗೊಂಡು, ಒಗ್ಗಟ್ಟಿನಿಂದ ನ್ಯಾಯ ಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಸ್ಥಳಕ್ಕೆ ರಾಮನಗರ ಎಸ್ ಪಿ ಮತ್ತು ಕಗ್ಗಲೀಪುರ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






