ಲೈಂಗಿಕ ಕಿರುಕುಳ ಕೇಸ್ ದಾಖಲಾಗುತ್ತಿದ್ದಂತೆ ಬ್ಯಾಂಕ್ʼನಿಂದ 55 ಲಕ್ಷ ವಿತ್‌ಡ್ರಾ ಮಾಡಿದ ಕಾಮುಕ ಸ್ವಾಮಿ!
ನವದೆಹಲಿ: 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ವಿರುದ್ಧ ಗಂಭೀರ ಅಕ್ರಮಗಳ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಎಫ್‌ಐಆರ್ ದಾಖಲಾಗುತ್ತಿದ್ದಂತೆ ಚೈತನ್ಯಾನಂದ ಬ್ಯಾಂಕ್‌ನಿಂದ ₹50-55 ಲಕ್ಷ ರೂಪಾಯಿಗಳನ್ನು ವಿತ್‌ಡ್ರಾ ಮಾಡಿದ್ದಾರೆ. ಜೊತೆಗೆ, ಖಾತೆ ತೆರೆಯುವ ಹಾಗೂ ಹಣ ವರ್ಗಾವಣೆ ವೇಳೆ ಎರಡು ಹೆಸರುಗಳಲ್ಲಿ ವಿಭಿನ್ನ ದಾಖಲೆಗಳನ್ನು ಬಳಸಿಕೊಂಡು ಬ್ಯಾಂಕ್ ಖಾತೆಗಳನ್ನು ನಿರ್ವಹಿಸುತ್ತಿದ್ದರೆಂಬುದು ಬೆಳಕಿಗೆ ಬಂದಿದೆ.
ಪ್ರಕರಣ ಇನ್ನೂ ಆರಂಭಿಕ ಹಂತದಲ್ಲಿದ್ದು, ವಂಚನೆ, ಪಿತೂರಿ ಹಾಗೂ ಹಣದ ದುರುಪಯೋಗದ ಸತ್ಯಾಂಶ ಪತ್ತೆ ಮಾಡಲು ಆರೋಪಿಯನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಬೇಕಾಗಿದೆ. ಆದರೆ ಪ್ರಸ್ತುತ ಆರೋಪಿ ತಲೆಮರೆಸಿಕೊಂಡಿದ್ದು, ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಲಾಗಿದೆ.
ಪ್ರಕರಣದ ಗಂಭೀರತೆಯನ್ನು ಗಮನಿಸಿದ ದೆಹಲಿ ಹೈಕೋರ್ಟ್, ಸ್ವಾಮಿ ಚೈತನ್ಯಾನಂದ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ತನಿಖೆಯಲ್ಲಿ, ಚೈತನ್ಯಾನಂದ ಸ್ವಾಮೀಜಿ **‘ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ ರಿಸರ್ಚ್’**ನ ಆಸ್ತಿಯನ್ನು ವೈಯಕ್ತಿಕ ಲಾಭಕ್ಕಾಗಿ ಬಳಸಿಕೊಂಡು, ‘ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ ರಿಸರ್ಚ್ ಫೌಂಡೇಶನ್ ಟ್ರಸ್ಟ್’ ಎಂಬ ನಕಲಿ ಟ್ರಸ್ಟ್ ಸ್ಥಾಪಿಸಿದ್ದರೆಂಬುದು ಬಹಿರಂಗವಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?