ಲೈಂಗಿಕ ಕಿರುಕುಳ ಪ್ರಕರಣ: ಕಾಂಗ್ರೆಸ್ ಪಕ್ಷದಿಂದ ಬಿ ಗುರಪ್ಪ ನಾಯ್ಡು ಉಚ್ಛಾಟನೆ!

ಬೆಂಗಳೂರು: ಕೆಪಿಸಿಸಿ ಕಾರ್ಯದರ್ಶಿ ಬಿ. ಗುರಪ್ಪ ನಾಯ್ಡು ವಿರುದ್ಧ ಶಿಕ್ಷಕಿಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಹೊರಿಸಿ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಿಜಿಎಸ್ ಬ್ಲೂಮ್ ಫೀಲ್ಡ್ ಶಾಲೆಯ ಅಧ್ಯಕ್ಷರೂ ಆಗಿರುವ ನಾಯ್ಡು, ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ವಿಡಿಯೋ ಮಾಡಿ ಬೆದರಿಕೆ ಹಾಕುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದರ ಬೆನ್ನಲ್ಲೇ ಆರೋಪ ಎದುರಿಸುತ್ತಿರುವ ಹಿರಿಯ ಮುಖಂಡ ಬಿ ಗುರಪ್ಪ ನಾಯ್ಡು ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ. ಲೈಂಗಿಕ ಕಿರುಕುಳ ಮತ್ತು ಮಹಿಳೆಯೊಬ್ಬರ ಗೌರವಕ್ಕೆ ಧಕ್ಕೆ ತಂದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ಕರ್ನಾಟಕ ಕಾಂಗ್ರೆಸ್ ಮುಖಂಡ ಬಿ ಗುರಪ್ಪ ನಾಯ್ಡು ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






