ಲೈಂಗಿಕ ದೌರ್ಜನ್ಯ ಪಿಡುಗನ್ನು ಬೇರು ಸಮೇತ ಕಿತ್ತೊಗೆಯಬೇಕಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಾರ್ಚ್ 4, 2025 - 13:48
 0  14
ಲೈಂಗಿಕ ದೌರ್ಜನ್ಯ ಪಿಡುಗನ್ನು ಬೇರು ಸಮೇತ ಕಿತ್ತೊಗೆಯಬೇಕಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಪಿಡುಗನ್ನು ಬೇರು ಸಮೇತ ಕಿತ್ತೊಗೆಯಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಎಚ್.ಡಿ.ಕೋಟೆ ತಾಲೂಕಿನ ಶಾಲೆಯ ಶಿಕ್ಷಕನೋರ್ವ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ವರದಿ ಗಮನಕ್ಕೆ ಬಂದಿದೆ. ಲೈಂಗಿಕ ದೌರ್ಜನ್ಯ ಪಿಡುಗನ್ನು ಬೇರು ಸಮೇತ ಕಿತ್ತೊಗೆಯಬೇಕಿದೆ. ಈ ಬಗ್ಗೆ ದೂರು ದಾಖಲಿಸಲು ತಿಳಿಸಿದ್ದು ತಪ್ಪಿತಸ್ಥ ಶಿಕ್ಷನ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದು ಹೇಳಿದರು.

ಇನ್ನೂ ಎಥಿಕ್ಸ್‌ ಸಮಿತಿ ವಿಚಾರ ಗೊತ್ತಿಲ್ಲ: ಪರಿಷತ್‌ ಸದಸ್ಯ ಸಿ.ಟಿ.ರವಿ ಅವರ ಅಶ್ಲೀಲ ಪದ ಪ್ರಯೋಗ ಆರೋಪಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ನನ್ನ ವಿರುದ್ಧ ನಿಂದನೆ ಮಾಡಿರುವ ಪ್ರಕರಣವನ್ನು ನೈತಿಕ ಸಮಿತಿಗೆ (ಎಥಿಕ್ಸ್ ಕಮಿಟಿ) ನೀಡಿರುವುದು ಗೊತ್ತಿಲ್ಲ. ನಾನು ಇಂದಷ್ಟೇ ಬೆಂಗಳೂರಿಗೆ ಬಂದಿದ್ದೇನೆ. ನಿಮಗೆ (ಮಾಧ್ಯಮ) ಎಷ್ಟು ಮಾಹಿತಿ ಇದೆಯೋ, ಅಷ್ಟೇ ಮಾಹಿತಿ ನನಗೂ ಇದೆ. ಈ ರೀತಿ ಯಾರಿಗೂ ಆಗಬಾರದೆನ್ನುವುದೇ ನನ್ನ ಕಳಕಳಿ ಎಂದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow