ವಕೀಲೆ ಜೀವಾ ಆತ್ಮಹತ್ಯೆ ಕೇಸ್: SIT ಅಧಿಕಾರಿಗಳಿಂದ DYSP ಕನಕಲಕ್ಷ್ಮೀ ಅರೆಸ್ಟ್

ಮಾರ್ಚ್ 11, 2025 - 16:01
 0  16
ವಕೀಲೆ ಜೀವಾ ಆತ್ಮಹತ್ಯೆ ಕೇಸ್: SIT ಅಧಿಕಾರಿಗಳಿಂದ DYSP ಕನಕಲಕ್ಷ್ಮೀ ಅರೆಸ್ಟ್

ಬೆಂಗಳೂರು: ಬೋವಿ ಅಭಿವೃದ್ಧಿ ನಿಗಮ ಅವ್ಯವಹಾರ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿದ್ದ ಜೀವಾ ಎನ್ನುವ ವಕೀಲೆಯ ಆತ್ಮಹತ್ಯೆ ಘಟನೆ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಭೋವಿ ನಿಗಮ ಅವ್ಯವಹಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ವಕೀಲೆ ಜೀವಾ ಹಾಗು ಇತರರನ್ನು ವಿಚಾರಣೆ ಮಾಡಲಾಗಿತ್ತು.

ವೇಳೆ ಜೀವಾಳಿಗೆ ಡಿವೈಎಸ್ಪಿ ಕನಕಲಕ್ಷ್ಮೀ ಸಾಕಷ್ಟು ಟಾರ್ಚರ್ ನೀಡಿರುವ ಆರೋಪ ಇದೆ.  ಇದೀಗ ಘಟನೆ ಸಂಬಂಧ ಡಿವೈಎಸ್ಪಿ ಕನಕಲಕ್ಷ್ಮೀ ಬಂಧನವಾಗಿದೆ. ಎಸ್ ಐಟಿ ಅಧಿಕಾರಿಗಳು ಇಂದು (ಮಾರ್ಚ್​ 11) ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮಿ ಅವರನ್ನು ಬಂಧಿಸಿದ್ದಾರೆ. ಕರ್ನಾಟಕ ಭೋವಿ ನಿಗಮ ಹಗರಣದ ತನಿಖೆ ಎದುರಿಸಿದಾಗ ಪೊಲೀಸ್ ಅಧಿಕಾರಿ ವಿವಸ್ತ್ರಗೊಳಿಸಿ ವಿಚಾರಣೆ ನಡೆಸಿದ್ದಲ್ಲದೆ,

25 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಮಹಿಳಾ ವಕೀಲೆ ಜೀವಾ 13 ಪುಟಗಳ ಡೆತ್ನೋಟ್ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಂಬಂಧ ಸಿಐಡಿ ಡಿವೈಎಸ್ ಪಿ ಕನಕಲಕ್ಷ್ಮಿ ವಿರುದ್ಧ ಜೀವಾ ಸಹೋದರಿ ದೂರು ನೀಡಿದ್ದರು. ಇದೀಗ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಕನಕಲಕ್ಷ್ಮಿ ಅವರನ್ನು ಬಂಧಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow