ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಅವರು ಗೆಲ್ಲುವುದು ನಿಶ್ಚಿತ: ಡಿ. ಕೆ. ಶಿವಕುಮಾರ್

ನವೆಂಬರ್ 11, 2024 - 20:22
 0  12
ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಅವರು ಗೆಲ್ಲುವುದು ನಿಶ್ಚಿತ: ಡಿ. ಕೆ. ಶಿವಕುಮಾರ್

ಬೆಂಗಳೂರು: ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಅವರು ಗೆಲ್ಲುವುದು ನಿಶ್ಚಿತ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಅವರು ಗೆಲ್ಲುವುದು ನಿಶ್ಚಿತ. ಅಲ್ಲಿ ಬೇರೆ ಪಕ್ಷಗಳ ನಾಯಕರು ಕೂಡ ಪ್ರಿಯಾಂಕಾ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದು, ಪ್ರಿಯಾಂಕಾ ಅವರನ್ನು ಸಂಸತ್ ಸದಸ್ಯೆಯಾಗಿ ನೋಡಲು ಬಯಸಿದ್ದಾರೆ. ಅವರು ಹಾಗೂ ರಾಹುಲ್ ಗಾಂಧಿ ಅವರು ಕ್ಷೇತ್ರದ ಅಭಿವೃದ್ಧಿ ಮಾಡಲಿದ್ದಾರೆ. ಅಲ್ಲಿನ ಉಪಚುನಾವಣೆ ಏಕಪಕ್ಷೀಯ ಸ್ಪರ್ಧೆಯಾಗಿದೆ ಎಂದು ಹೇಳಿದರು.

ಇನ್ನೂ ಕೋವಿಡ್ ಅಕ್ರಮ ವಿಚಾರದಲ್ಲಿ ನಿವೃತ್ತ ನ್ಯಾ. ಮೈಕಲ್​ ಡಿ ಕುನ್ಹಾ ಅವರ ಸಮಿತಿ ಸರ್ಕಾರದ ಏಜೆಂಟ್​ನಂತೆ ನಡೆದುಕೊಳ್ಳುತ್ತಿದೆ ಎಂಬ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, "ಅವರ ಪರವಾಗಿ ವರದಿ ಕೊಟ್ಟರೆ ಎಲ್ಲವೂ ನ್ಯಾಯಬದ್ಧವಾಗಿರುತ್ತವೆ. ಅವರ ವಿರುದ್ಧವಾಗಿ ನೀಡುವ ವರದಿ ಬಗ್ಗೆ ಹೀಗೆ ಆರೋಪ ಮಾಡುತ್ತಾರೆ. ದ್ವೇಷ ರಾಜಕಾರಣ ಮಾಡುತ್ತಿರುವವರು ಬಿಜೆಪಿಯವರು. ಅವರು ಯಾವುದೇ ಆರೋಪ ಮಾಡಿಕೊಳ್ಳಲಿ ಎಂದು ಕಿಡಿಕಾರಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow