ವಯಸ್ಸಾದ ಅತ್ತೆಗೆ ಚಟ್ಟ ಕಟ್ಟೋಕೆ ಬಯಸಿದ ಸೊಸೆ: ಮಹಿಳೆ ಇಟ್ಟ ಬೇಡಿಕೆಗೆ ಡಾಕ್ಟರ್ ಶಾಕ್

ವೈವಾಹಿಕ ಜೀವನದಲ್ಲಿ ಎಲ್ಲವೂ ಸರಿಯಿದ್ದರೂ ಅದೆಷ್ಟೋ ಮನೆಗಳಲ್ಲಿ ಅತ್ತೆ ಸೊಸೆ ನಡುವಿನ ಸಂಬಂಧವು ಸರಿ ಇರುವುದೇ ಇಲ್ಲ. ಹೌದು, ಈ ಅತ್ತೆ ಸೊಸೆ ಒಂದೇ ಮನೆಯಲ್ಲಿ ಇದ್ದ ಮೇಲೆ ಜಗಳ, ಗಲಾಟೆ ಮಾಮೂಲಿ. ಸಣ್ಣ-ಪುಟ್ಟ ವಿಷಯಕ್ಕೂ ಇಬ್ಬರ ನಡುವೆ ಜಗಳಗಳು ನಡೆಯುತ್ತಲೇ ಇರುತ್ತದೆ. ಇದ್ರಿಂದ ಮನೆಯ ನೆಮ್ಮದಿಯಂತೂ ಹಾಳು, ಅದಲ್ಲದೇ ಅತ್ತೆಯ ವಿರುದ್ಧ ದೂರು ನೀಡಲು ಪೋಲಿಸ್ ಠಾಣೆಯ ಮೆಟ್ಟಿಲೇರಿದ ಹಲವು ಘಟನೆಗಳನ್ನು ನಾವು ನೋಡಿರುತ್ತೇವೆ. ಆದ್ರೆ ಇಲ್ಲೊಂದು ಘಟನೆ ಶಾಂಕಿಗ್ ಆಗಿದೆ.
ಹೌದು ಅತ್ತೆಯನ್ನು ಸಾಯಿಸಲು ಮಾತ್ರೆ ಹೇಳಿ ಎಂದು ಸೊಸೆ ವೈದ್ಯರಿಗೆ ವಾಟ್ಸಾಪ್ ಸಂದೇಶ ಕಳುಹಿಸಿದ್ದಾಳೆ ಮಹಿಳೆಯೋರ್ವರ ವಾಟ್ಸಾಪ್ ಸಂದೇಶ ಕಂಡು ಬೆಂಗಳೂರಿನ ವೈದ್ಯರೊಬ್ಬರು ಬೆಚ್ಚಿ ಬಿದ್ದಿದ್ದಾರೆ.
ಬೆಂಗಳೂರು ಮೂಲದ ವೈದ್ಯರಾದ ಡಾ. ಸುನಿಲ್ ಕುಮಾರ್ ಅವರಿಗೆ ಇನ್ಸ್ಟಾಗ್ರಾಮ್ನಲ್ಲಿ ಓರ್ವ ಮಹಿಳೆ ಪರಿಚಯವಾಗಿದ್ದಾಳೆ. ಮಹಿಳೆ ಇನ್ಸ್ಟಾಗ್ರಾಮ್ ಮೂಲಕ ಡಾ. ಸುನಿಲ್ ಕುಮಾರ್ ಅವರ ದೂರವಾಣಿ ಸಂಖ್ಯೆ ಪಡೆದಿದ್ದಾಳೆ. ನಂತರ, ಸೋಮವಾರ (ಫೆಬ್ರವರಿ 17) ರಂದು ಮಹಿಳೆ, ಡಾ. ಸುನಿಲ್ ಕುಮಾರಿಗೆ ವಾಟ್ಸಾಪ್ನಲ್ಲಿ ಸಂದೇಶ ಕಳುಹಿಸಿದ್ದಾಳೆ. ಮಹಿಳೆಯ ಸಂದೇಶ ಕಂಡು ವೈದ್ಯರು ಅಚ್ಚರಿಗೊಂಡಿದ್ದಾರೆ.
ನ್ನಡದಲ್ಲಿ ಸಂದೇಶ ಕಳುಹಿಸಿ ಮಾತು ಆರಂಭಿಸಿದರು. ನೀವು ನನಗೆ ಬೈಯುವುದಿಲ್ಲ ಎಂದರೆ ನಿಮ್ಮನ್ನು ಒಂದು ಮಾತು ಕೇಳುತ್ತೇನೆ ಎಂದರು. ಬಳಿಕ ಅತ್ತೆ ತುಂಬ ಕಿರುಕುಳ ನೀಡುತಿದ್ದಾರೆ. ಅವರನ್ನು ಸಾಯಿಸಲು ಎರಡು ಮಾತ್ರೆ ಕೊಡಿ ಎಂದರು. ಅದಾದ ಬಳಿಕ ನಾನು ಪ್ರಶ್ನೆ ಮಾಡಿದೆ. ಬಳಿಕ ಎಲ್ಲ ಸಂದೇಶಗಳನ್ನು ಡಿಲೀಟ್ ಮಾಡಿದರು.
ಈ ರೀತಿಯಾಗಿ ಮಹಿಳೆ ಮತ್ತು ವೈದ್ಯರ ನಡುವೆ ಸಂಭಾಷಣೆ ನಡೆದಿದೆ. ಸೊಸೆ ಅತ್ತೆಯನ್ನು ಸಾಯಿಸಲು ವೈದ್ಯರ ಬಳಿ ಮಾತ್ರೆ ಕೇಳಿದ್ದಾರೆ. ಆ ಬಳಿಕ ಮಹಿಳೆ ಕೂಡಲೇ ಸಂದೇಶಗಳನ್ನು ಡಿಲೀಟ್ ಮಾಡಿದ್ದು, ವೈದ್ಯರ ನಂಬರ್ ಬ್ಲಾಕ್ ಮಾಡಿದ್ದಾರೆ. ಮಹಿಳೆಯ ಸಂದೇಶ ಓದಿ ಶಾಕ್ ಆದ ವೈದ್ಯ ಸುನಿಲ್ ಕುಮಾರ್ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಮಹಿಳೆ ವಿರುದ್ಧ ದೂರು ನೀಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






